Urdu   /   English   /   Nawayathi

ಛತ್ತೀಸ್ಗಢದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮರಣ, 3 ಗಾಯ

share with us

ರಾಯ್ಪುರ: 14 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಛತ್ತೀಸ್ಗಢದ ರಾಜ್'ನಂದ್ ಗಾಂವ್ ಎಂಬಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 9 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ನವರಾತ್ರಿ ಹಿನ್ನಲೆಯಲ್ಲಿ ಕುಟುಂಬವೊಂದು ಬೊಲೆರೋ ಎಸ್'ಯುವಿ ಕಾರಿನಲ್ಲಿ ದೊಂಗಾರ್ಗರ್ ಟೌನ್'ನಲ್ಲಿರುವ ಮಾ ಬಮ್ಲೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದರು. ದೇಗುಲ ಭೇಟಿ ಬಳಿಕ ಭಿಲ್ಲೈ'ಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾರೆ. 

ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್'ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದು, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆ ಬಳಿಕ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا