Urdu   /   English   /   Nawayathi

ಕೇರಳ: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿ ಸೂಚನೆ

share with us

ಕೊಯಿಕೋಡ್: 19 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ನಿಲಕ್ಕಲ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಡುವವರ ವಿರುದ್ಧ ಪ್ರಕರಣ ದಾಖಲಿಸಿಸುವಂತೆ ಕೇರಳ ಡಿಜಿಪಿ ಲೋಕನಾಥ್‌ ಬೆಹೆರಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ವಿಕೋಪಕ್ಕೆ ತಿರುಗಿತ್ತು.

ಗುರುವಾರವೂ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಿಲಕ್ಕಲ್‌, ಪಂಪಾ, ಸನ್ನಿಧಾನ, ಎಲವುಂಗ್‌ನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಇಬ್ಬರಿಗಿಂತ ಹೆಚ್ಚು ಜನರು ಒಟ್ಟಿಗೆ ಇರುವುದನ್ನು ನಿಷೇಧಿಸಲಾಗಿದೆ.

ಅಂತರರಾಷ್ಟ್ರೀಯ ವಿಶ್ವ ಹಿಂದೂ ಪರಿಷತ್‌(ಎಎಚ್‌ಪಿ)ನ ಕಾರ್ಯಕರ್ತರು ತಮ್ಮ ಬೆಂಬಲಿಗರನ್ನು ನಿಲಕ್ಕಲ್‌ಗೆ ಕಪ್ಪು ಬಟ್ಟೆಗಳನ್ನು ಧರಿಸಿಕೊಂಡು ಆಪಾರ ಸಂಖ್ಯೆಯಲ್ಲಿ ಸೇರುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಇತರೆ ಪ್ರಚೋದನಾಕಾರಿ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಈ ಹಿನ್ನೆಲೆಯಲ್ಲಿ ತಪ್ಪು ಸಂದೇಶಗಳನ್ನು ಹಂಚಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿಜಿಪಿ ಸೂಚನೆ ನೀಡಿದ್ದಾರೆ.

ಕೇರಳದ ಸಚಿವ ಕಡಕಂಪಲ್ಲಿ ಸುರೇಂದ್ರನ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಹಿಂಸಾಚಾರದ ಹಿಂದೆ ಫ್ಯಾಸಿಸ್ಟ್ ಶಕ್ತಿಗಳ ಕೈವಾಡ ಇದೆ ಎಂದರು. ಜತೆಗೆ, ಬಿಜೆಪಿ ಹಾಗೂ ಸಂಘ ಪರಿವಾರ ವಿರುದ್ಧ ಹರಿಹಾಯ್ದರು.  

ಇದೇ ವೇಳೆ ಹಿಂದೂ ಕಾರ್ಯಕರ್ತರೊಬ್ಬರು ತಮ್ಮ ಬೆಂಬಲಿಗರನ್ನು ಶಬರಿಮಲೆಗೆ ಬರುವಂತೆ ಹೇಳುತ್ತಿರುವ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಿದರು. 

ಶಬರಿಮಲೆ ವಿಚಾರವಾಗಿ ಬಿಜೆಪಿ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು.

‘ರಾಜ್ಯ ಸರ್ಕಾರ ಶಬರಿಮಲೆ ವಿಚಾರಕ್ಕೆ ಸಂಬಂಧಿಸಿ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಬೇಕು’ ಎಂದು ಬಿಜೆಪಿಯ ಏಕೈಕ ಶಾಸಕ ಓ. ರಾಜಗೋಪಾಲ್‌ ಆಗ್ರಹಿಸಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا