Urdu   /   English   /   Nawayathi

ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು

share with us

ಶ್ರೀನಗರ: 21 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ  ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು  ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ. 
ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಈ ವಿಷಯವನ್ನು ಸ್ಪಷ್ಟಗೊಳಿಸಿದ್ದು, ಒಳನುಸುಳುತ್ತಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.  ಉಗ್ರರ ಬಗ್ಗೆ ಇನ್ನೂ ಖಚಿತ ಮಾಹಿತಿ ದೊರೆತಿಲ್ಲ, ಸದ್ಯದಲ್ಲೇ ಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.

 ಕಾರ್ಯಾಚರಣೆ ವೇಳೆಯಲ್ಲಿ ಯಾವ ಪೊಲೀಸ್ ಸಿಬ್ಬಂದಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا