Urdu   /   English   /   Nawayathi

ಮಾಲೇಗಾಂವ್ ಸ್ಫೋಟ ಪ್ರಕರಣ: ಪುರೋಹಿತ್‌ ವಿರುದ್ಧ ದೋಷಾರೋಪ ನಿಗದಿಗೆ ತಡೆ ಇಲ್ಲ

share with us

ಮುಂಬೈ: 29 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರ ವಿರುದ್ಧ ದೋಷಾರೋಪ ನಿಗದಿಪಡಿಸುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಯುಎಪಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸುವುದನ್ನು ಪ್ರಶ್ನಿಸಿ ಪುರೋಹಿತ್ ಸಲ್ಲಿಸಿರುವ ಅರ್ಜಿಯನ್ನು ಮುಂದಿನ ತಿಂಗಳು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎ.ಎಸ್.ಗಡ್ಕರಿ ಅವರ ಪೀಠ ಹೇಳಿದೆ.

ಪುರೋಹಿತ್ ಅವರ ಅರ್ಜಿಗೆ ನವೆಂಬರ್ 21ರೊಳಗೆ ಪ್ರತಿಕ್ರಿಯೆ ನೀಡುವಂತೆ ಎನ್‌ಐಎ ಪರ ವಕೀಲ ಸಂದೇಶ್ ಪಾಟೀಲ್ ಅವರಿಗೆ ಕೋರ್ಟ್ ನಿರ್ದೇಶನ ನೀಡಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا