Urdu   /   English   /   Nawayathi

ಪರಮಾಪ್ತ ಮಿತ್ರ ಚೀನಾದಿಂದ ಪಾಕಿಸ್ತಾನಕ್ಕೆ ಆರ್ಥಿಕ ನೆರವು!

share with us

ಬೀಜಿಂಗ್: 04 ನವೆಂಬರ್ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಅಕ್ಷರಸಹ ಏಜಾಂಗಿಯಾಗಿ ನಿಂತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಆರ್ಥಿಕ ಸಹಾಯಕ್ಕಾಗಿ ಎದುರು ನೋಡುತ್ತಿರುವ ಪಾಕಿಸ್ತಾನಕ್ಕೆ ತನ್ನ ಪರಮಾಪ್ತ ಮಿತ್ರ ಚೀನಾ ಆರ್ಥಿಕ ನೆರವು ನೀಡಲು ಮುಂದಾಗಿದೆ. ಪಾಕಿಸ್ತಾನದ ವಿದೇಶಿ ವಿನಿಮಯ ಶೇ.42 ಕ್ಕೆ ಕುಸಿದಿದ್ದು, ತೀವ್ರವಾಗಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ರಾಷ್ಟ್ರಕ್ಕೆ ಆರ್ಥಿಕ ನೆರವಿನ ಅಗತ್ಯವಿದೆ. ಆದರೆ ಪಾಕಿಸ್ತಾನಕ್ಕೆ ಆರ್ಥಿಕ ನೆರವು ನೀಡುವ ವಿಚಾರದಲ್ಲಿ ಚೀನಾ ಪ್ರತಿಕ್ರಿಯೆ ನೀಡಿದ್ದು ಪಾಕಿಸ್ತಾನಕ್ಕೆ ಆರ್ಥಿಕ ನೆರವು ನೀಡಬೇಕೆಂದರೆ ಒಂದಷ್ಟು ಸುತ್ತಿನ ಮಾತುಕತೆ ಅಗತ್ಯವೆಂದು ಹೇಳಿದೆ. 

ಕಳೆದ ತಿಂಗಳು ಪಾಕಿಸ್ತಾನ ಸೌದಿ ಅರೇಬಿಯಾದಿಂದ 6 ಬಿಲಿಯನ್ ನಷ್ಟು ತುರ್ತು ಸಾಲ ಪಡೆದುಕೊಂಡಿತ್ತು. ಆದರೆ ಪಾಕಿಸ್ತಾನಕ್ಕೆ ಇಷ್ಟು ಮೊತ್ತದ ಸಾಲ ಸಾಲದೇ ಬಂದಿದ್ದು ಈಗ ಮತ್ತೊಮ್ಮೆ ಸಾಲ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಸೌದಿ ಅರೇಬಿಯಾದಿಂದ ಸಾಲ ಪದೆದ ಬಳಿಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಚೀನಾ ಪ್ರಧಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೆ ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ದ್ವಿಪಕ್ಷೀಯ ಮಾತುಕತೆ ವೇಳೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಇಮ್ರಾನ್ ಖಾನ್ ಚೀನಾ ಪ್ರಧಾನಿಯೊಂದಿಗೆ ಚರ್ಚೆ ನಡೆಸಿದ್ದು, ದೇಶದ ಆರ್ಥಿಕ ಸ್ಥಿತಿ ಕಷ್ಟಕರವಾಗಿದೆ ಎಂದು ವಿವರಿಸಿದ್ದಾರೆ,  ಅಗತ್ಯವಿರುವ ನೆರವು ನೀಡುವುದಕ್ಕೆ ಚೀನಾ ಸಹ ಸಿದ್ಧ ಈ ಬಗ್ಗೆ ಹೆಚ್ಚಿನ ಮಾತುಕತೆ ನಡೆಸಬೇಕಿದೆ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا