Urdu   /   English   /   Nawayathi

ಉಪ ಚುನಾವಣೆ ಫಲಿತಾಂಶ: ನಾಲ್ಕು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ

share with us

ಬೆಂಗಳೂರು: 06 ನವೆಂಬರ್ (ಫಿಕ್ರೋಖಬರ್ ಸುದ್ದಿ) ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ  ಉಪ ಚುನಾವಣೆ ಫಲಿತಾಂಶ ಪ್ರಕ್ರಿಯೆ ಆರಂಭವಾಗಿದ್ದು, ಮಂಡ್ಯ, ಬಳ್ಳಾರಿ ಲೋಕಸಭಾ ಹಾಗೂ ರಾಮನಗರ, ಜಮಖಂಡಿಯಲ್ಲಿ ಜೆಡಿಎಸ್-ಕಾಂಗ್ರೆಸ್  ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭಾ ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ  ಪ್ರಕ್ರಿಯೆ ಬೆಳ್ಳಗೆ 8 ಗಂಟೆಯಿಂದ ಆರಂಭವಾಗಿದೆ.

ವಿವಿಧೆಡೆ ಮತಗಟ್ಟೆಗಳನ್ನು ಇರಿಸಿದ ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಚುನಾವಣಾ ಅಧಿಕಾರಿಗಳು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಸಿದರು.ನಂತರ ಮತ ಪೆಟ್ಟಿಗೆಯಲ್ಲಿನ ಮತ ಎಣಿಕೆ ಆರಂಭಿಸಿದರು. ಮೊದಲ ಸುತ್ತಿನಲ್ಲಿ ಬಳ್ಳಾರಿಯಲ್ಲಿ ವಿ.ಎಸ್. ಉಗ್ರಪ್ಪ, ಮಂಡ್ಯದಲ್ಲಿ ಎಲ್. ಆರ್. ಶಿವರಾಮೇಗೌಡ  ಹಾಗೂ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಜಮಖಂಡಿಯಲ್ಲಿ ಆನಂದ್ ನ್ಯಾಮೇಗೌಡ  ಮುನ್ನಡೆಯಲ್ಲಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಹಾಗೂ ಮಧು ಬಂಗಾರಪ್ಪ  ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಎರಡನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕೊನೆ  ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರಿಂದ ಬಹುತೇಕವಾಗಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸುವ ಸಾಧ್ಯತೆ ಇದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا