Urdu   /   English   /   Nawayathi

ಕುವೈಟ್‌: ಭಾರೀ ಮಳೆ ;ಪ್ರಮುಖ ರಸ್ತೆಗಳು ಜಲಾವೃತ

share with us

ಕುವೈಟ್‌: 07 ನವೆಂಬರ್ (ಫಿಕ್ರೋಖಬರ್ ಸುದ್ದಿ) ಕುವೈಟ್‌ನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ನಿಂತಿರುವುದರಿಂದ ಮಂಗಳವಾರ ಶಾಲೆ, ಕಾಲೇಜುಗಳಿಗೆ ಮತ್ತು ಸಚಿವಾಲಯದ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು.

ಸಿಡಿಲಿನ ಅಬ್ಬರದೊಂದಿಗೆ ಗಾಳಿ-ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಹಲವಾರು ಮಂದಿಯನ್ನು ರಾತ್ರಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

 ಕುವೈಟ್‌ನಲ್ಲಿ ಇನ್ನೂ 2-3 ದಿನ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا