Urdu   /   English   /   Nawayathi

ಚಿನ್ನದ ಗಟ್ಟಿ ಡೀಲ್ ಪ್ರಕರಣ : ತನಿಖೆ ಪ್ರಗತಿಯಲ್ಲಿದೆ

share with us

ಬೆಂಗಳೂರು: 12 ನವೆಂಬರ್ (ಫಿಕ್ರೋಖಬರ್ ಸುದ್ದಿ) ಚಿನ್ನದ ಗಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಪ್ರಗತಿಯಲ್ಲಿದೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆಗೆ ಒಳಪಡಿಸಿ ಹಲವು ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ. ಇನ್ನೂ ಕೆಲವರ ವಿಚಾರಣೆ ನಡೆಸಬೇಕಾಗಿದೆ ಎಂದು ತಿಳಿಸಿದರು. ಚಿನ್ನದ ಗಟ್ಟಿಗಳು ಎಲ್ಲಿ ತಲುಪಿವೆ ಎಂಬುದರ ಬಗ್ಗೆಯೂ ತನಿಖೆ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

#ಸ್ಪಷ್ಟನೆ
ಜನಾರ್ದನ ರೆಡ್ಡಿ ಅವರ ಆಪ್ತ ಅಲಿ ಖಾನ್ ಅವರನ್ನು ಬಂಧಿಸಿಲ್ಲ ಎಂದು ಅಲೋಕ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಚಿನ್ನದ ಗಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಖಾನ್ ಅವರನ್ನು ವಿಚಾರಣೆಗೆ ಒಳಪಡಿಸಿ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.ಚಿನ್ನದ ಗಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಅವರನ್ನು ಸಿಸಿಬಿ ಪೊಲೀಸರು ನಿನ್ನೆ ಬಂಧಿಸಿದ್ದು, ಈಗ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا