Urdu   /   English   /   Nawayathi

ಇಂಡೊನೇಷ್ಯಾದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು

share with us

ಜಕಾರ್ತಾ: 18 ನವೆಂಬರ್ (ಫಿಕ್ರೋಖಬರ್ ಸುದ್ದಿ) ಇಂಡೊನೇಷ್ಯಾದ ಪಶ್ಚಿಮ ಭಾಗದಲ್ಲಿರುವ ಸುಲವೇಸಿ ಪ್ರಾಂತ್ಯದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಭೂಕಂಪದಿಂದ 7 ಮಂದಿ ಸಾವನ್ನಪ್ಪಿದ್ದು, 8 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಸಮ್‌ಬೊಂನ್‌ ಪಂಗ್‌ಲೊಲಿ ಪ್ರಾಂತ್ಯದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ 7 ಮಂದಿಯ ಮೃತದೇಹಗಳು ಸಿಕ್ಕಿವೆ ಎಂದು ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕ್ಸಿನುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಲ್ಲದೇ, ಭೂಕುಸಿತದಿಂದ ಕನಿಷ್ಠ 8 ಮನೆಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ಮುಚ್ಚಿಹೋಗಿದೆ. ಅಂದಾಜಿನ ಪ್ರಕಾರ, 8 ಸಾವಿರ ಮಂದಿ ಮನೆಮಠ ಕಳೆದುಕೊಂಡಿದ್ದಾರೆ. ಪಶ್ಚಿಮ ಸುಲವೇಸಿ ಪ್ರಾಂತ್ಯದಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 2 ಸಾವಿರ ಮಂದಿ ಪ್ರಾಣ ಕಳೆದುಕೊಂಡಿದ್ದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا