Urdu   /   English   /   Nawayathi

ಹನುಮಂತನನ್ನು ದಲಿತ ಎಂದ ಉತ್ತರಪ್ರದೇಶ ಸಿಎಂಗೆ ಲೀಗಲ್ ನೋಟಿಸ್ ಜಾರಿ

share with us

ಜೈಪುರ: 29 ನವೆಂಬರ್ (ಫಿಕ್ರೋಖಬರ್ ಸುದ್ದಿ) ಹಿಂದೂ ದೇವರು ಹನುಮಂತನನ್ನು ದಲಿತ ಎಂದು ಉಲ್ಲೇಖಿಸದ ಕಾರಣಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಾಜಸ್ಥಾನದ ಬಲಪಂಥೀಯ ಗುಂಪೊಂದು ಗುರುವಾರ ಲೀಗಲ್ ನೋಟಿಸ್ ಜಾರಿ ಮಾಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಅಲ್ವಾರ್ ಜಿಲ್ಲೆಯ ಮಾಳಖೇಡದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಯೋಗಿ ಆದಿತ್ಯನಾಥ್ ಅವರು, ಹನುಮಂತ ಒಬ್ಬ ಅರಣ್ಯ ನಿವಾಸಿಯಾಗಿದ್ದು, ಎಲ್ಲಾ ಭಾರತೀಯ ಸಮುದಾಯಗಳನ್ನು ಉತ್ತರದಿಂದ ದಕ್ಷಿಣಕ್ಕೆ ಹಾಗೂ ಪೂರ್ವದಿಂದ ಪಶ್ಚಿಮಕ್ಕೆ ಸಂಪರ್ಕಿಸಲು ಕೆಲಸ ಮಾಡಿದ ಒಬ್ಬ ದಲಿತ ಎಂದು ಹೇಳಿದ್ದರು. 

ಹನುಮಂತನನ್ನು ದಲಿತ ಎಂದು ಹೇಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜಸ್ಥಾನದ ಸರ್ವ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸುರೇಶ್ ಮಿಶ್ರಾ ಅವರು ಯೋಗಿ ಆದಿತ್ಯನಾಥ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಅಲ್ಲದೆ, 3 ದಿನಗಳ ಒಳಗಾಗಿ ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿಗಳು ಹನುಮಂತನನ್ನು ದಲಿತನೆಂದು ಕರೆದಿದ್ದಕ್ಕೆ ಬಹಳ ನೋವಾಗಿದೆ. ಅವರ ಹೇಳಿಕೆಯಿಂದ ಹಲವಾರು ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದೆ. ರಾಜಕೀಯ ಲಾಭಕ್ಕಾಗಿ ಯೋಗಿ ಆದಿತ್ಯನಾಥ್ ಅವರು ಹನುಮಂತನ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆಂದು ಸುರೇಶ್ ಮಿಶ್ರಾ ಅವರು ಹೇಳಿದ್ದಾರೆ. ಈ ನಡುವೆ ಕಾಂಗ್ರೆಸ್ ಕೂಡ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಮಾತನಾಡಿ, ಬಿಜೆಪಿ ಜನರು ಹಾಗೂ ಸಮಾಜವನ್ನು ಒಡೆಯುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ದೇವರುಗಳನ್ನು ಜಾತಿ ಆಧಾರದ ಮೇಲೆ ಒಡೆಯುವ ಪ್ರಯತ್ನ ಮಾಡಿದೆ ಎಂದು ಹೇಳಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا