Urdu   /   English   /   Nawayathi

ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಮಂಗಳೂರು ಶಿಕ್ಷಕ, ವಿಡಿಯೋ ವೈರಲ್!

share with us

ಮಂಗಳೂರು: 15 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ವಿದ್ಯಾರ್ಥಿಗಳನ್ನು ಸನ್ಮಾರ್ಗದಲ್ಲಿ ನಡೆಸಬೇಕಾದ ಶಿಕ್ಷಕನೇ ವಿದ್ಯಾ ದೇಗುಲದಲ್ಲಿ ವಿದ್ಯಾರ್ಥಿಯನ್ನು ಕಾಮತೃಷೆಗೆ ಬಳಸಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನ ಹೊಸ್ಮಾರು-ನಾರಾವಿ ನಡುವಿನ ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿಕ್ಷಕನೊರ್ವ ವಿದ್ಯಾರ್ಥಿನಿಯೊಬ್ಬಳಿಗೆ ಮಂಕುಬೂದಿ ಎರಚಿ ರೂಂವೊಂದರಲ್ಲಿ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣ ಫೇಸ್ ಬುಕ್, ವಾಟ್ಸಾಪ್ ನಲ್ಲಿ ವೈರಲ್ ಆಗುತ್ತಿದೆ. 

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಈ ಸಂಬಂಧ ಇಲ್ಲಿಯವರೆಗೂ ವಿದ್ಯಾರ್ಥಿನಿಯ ಪೋಷಕರು ದೂರು ದಾಖಲಿಸಿಲ್ಲ. ಈ ಹಿನ್ನೆಲೆಯಲ್ಲೇ ಪೊಲೀಸರೇ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಲುವ ಸಾಧ್ಯತೆ ಇದೆ. ಪೊಲೀಸ್ ಮೂಲಗಳ ಪ್ರಕಾರ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡಿರುವ ಶಿಕ್ಷಕ ಬೆಳ್ತಂಗಡಿಯ ಪ್ರಸಾದ್ ಎಂದು ತಿಳಿದುಬಂದಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا