Urdu   /   English   /   Nawayathi

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಓರ್ವ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ

share with us

ಶಿವಮೊಗ್ಗ: 18 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಹೋರಿ ಬೆದರಿಸುವ ಸ್ಪರ್ಧೆ ನೋಡಲು ನಿಂತಿದ್ದ ಜನರ ಭಾರದಿಂದ ನಿರ್ಮಾಣ ಹಂತದ ಕಟ್ಟದ ಸಜ್ಜ ಕುಸಿದು ಬಿದ್ದ ಪರಿಣಾಮ, ಘಟನೆಯಲ್ಲಿ ಓರ್ವ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗದಿಗೆಪ್ಪ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ಮನೆಯೊಂದರ ಸಜ್ಜಾ ಹಾಗೂ ಅದರ ಪ್ಲಾಸ್ಟಿಕ್ ಶೀಟ್ ಮೇಲೆ ಹಲವು ಮಂದಿ ಕುಳಿತುಕೊಂಡಿದ್ದರು. ಅಧಿಕ ಭಾರದಿಂದಾದಿ ಇದ್ದಕ್ಕಿದ್ದಂತೆ ಸಜ್ಜಾ ಹಾಗೂ ಪ್ಲಾಸ್ಟಿಕ್ ಶೀಟ್ ಕುಸಿದು ಬಿದ್ದಿದೆ. ಇದರಿಂದಾಗಿ ಸಜ್ಜಾ ಕೆಳಗೆ ನಿಂತಿದ್ದ ಗದಿಗೆಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಗಂಭೀರವಾಗಿ ಗಾಯಗೊಂಡಿದ್ದ ಗದಿಗೆಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವಗಢದಲ್ಲಿ 12 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا