Urdu   /   English   /   Nawayathi

ಪಾರ್ಕ್ ಗಳಲ್ಲಿ ನಮಾಜ್ ಮಾಡುವಂತಿಲ್ಲ: ಕಂಪನಿಗಳಿಗೆ ಉ.ಪ್ರ. ಪೊಲೀಸರಿಂದ ನೋಟಿಸ್

share with us

ನೊಯ್ಡಾ: 25 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಪಾರ್ಕ್ ಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ನಮಾಜ್‌ ಮಾಡುವುದನ್ನು ತಡೆಯಬೇಕು ಎಂದು ಉತ್ತರ ಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಒಂದು ವೇಳೆ ಕಂಪನಿಗಳ ಉದ್ಯೋಗಿಗಳು ಪಾರ್ಕ್ ಗಳಲ್ಲಿ ನಮಾಜ್ ಮಾಡುವುದು ಕಂಡುಬಂದರೆ ಅದಕ್ಕೆ ಕಂಪನಿಗಳನ್ನೇ ಹೊಣೆ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಶುಕ್ರವಾರದ ನಮಾಜ್ ಅನ್ನು ಪಾರ್ಕುಗಳಂತಹ ತೆರೆದ ಸಾರ್ವಜನಿಕ ಸ್ಥಳಗಳಲ್ಲಿ ನಡೆಸದೆ ಮಸೀದಿಗಳಲ್ಲಿ ಮಾತ್ರ ನಡೆಸುವಂತೆ ಮುಸ್ಲಿಂ ಉದ್ಯೋಗಿಗಳಿಗೆ ಸೂಚಿಸಬೇಕು ಎಂದು ಉತ್ತರ ಪ್ರದೇಶ ಪೊಲೀಸರು ಕಂಪನಿಗಳಿಗೆ ಆದೇಶಿಸಿದ್ದಾರೆ.

ನೊಯ್ಡಾದಲ್ಲಿ ಇತ್ತೀಚಿಗೆ ಪಾರ್ಕ್ ಗಳಲ್ಲಿ ನಮಾಜ್ ಮಾಡುವುದನ್ನು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೊಯ್ಡಾದ ಎಲ್ಲಾ ಪೊಲೀಸ್ ಠಾಣೆಗಳು ಕಳೆದ ವಾರ ಈ ನೋಟಿಸ್ ಜಾರಿ ಮಾಡಿವೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶ ಪೊಲೀಸರು, ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಹಲವು ಕಂಪನಿಗಳ ಉದ್ಯೋಗಿಗಳು ಶುಕ್ರವಾರ ಮಧ್ಯಾಹ್ನ ಪಾರ್ಕ್ಗಳಲ್ಲಿ ನಮಾಜ್ ಮಾಡುತ್ತಿರುವ ಬಗ್ಗೆ ನಮಗೆ ದೂರುಗಳು ಬಂದಿವೆ. ಉದ್ಯೋಗಿಗಳು ಮಸೀದಿ, ಈದ್ಗಾ ಮೈದಾನಗಳಲ್ಲಿ ನಮಾಜ್ ಸಲ್ಲಿಸಲು ಸೂಚಿಸವಂತೆ ಆ ಕಂಪನಿಗಳಿಗೆ ಸೂಚಿಸಲಾಗಿದೆ ಎಂದು ನೊಯ್ಡಾ ಪೊಲೀಸರು ತಿಳಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا