Urdu   /   English   /   Nawayathi

ಮದ್ದೂರು: ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಕೊಲೆ ಪ್ರಕರಣ, ನಾಲ್ವರ ಬಂಧನ

share with us

ಮಂಡ್ಯ: 25 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮದ್ದೂರು ತಾಲ್ಲೂಕಿನ ಪ್ರಭಾವಿ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಯೋಗೇಶ್ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಟ್ಟು ಐವರನ್ನು ಬಂಧಿಸಿದ್ದಾರೆ. ಯೋಗೇಶ ಅಲಿಯಾಸ್ ತಮಟೆ, ಹೇಮಂತ, ಶಿವರಾಜ, ಸ್ವಾಮಿ ಮತ್ತು ಯೋಗೇಶ ಬಂಧಿತರು. ಆರೋಪಿಗಳ ವಿರುದ್ದ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ವಾಮಿಯನ್ನು ಸೋಮವಾರ ರಾತ್ರಿಯೇ ಮದ್ದೂರು ಪೊಲೀಸರು ಬಂಧಿಸಿದ್ದರು ಕೊಲೆಗೆ ರಾಜಕೀಯ ದ್ವೇಷ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಡಿಸೆಂಬರ್ 24, 2016ರಂದು ಜಿಲ್ಲೆಯಲ್ಲಿ ಜೋಡಿಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು. ಜಾಮೀನು ಮೇಲೆ ಹೊರಗೆ ಬಂದಿರುವ ಆರೋಪಿಗಳು ಪ್ರಕಾಶ್ ಅವರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ತೊಪ್ಪನಹಳ್ಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗಿ ಬಂದೋಬಸ್ತ್‌ ಹಾಕಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೆರವಣಿಗೆಯಲ್ಲಿ ತೊಪ್ಪನಹಳ್ಳಿಗೆ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا