Urdu   /   English   /   Nawayathi

ಚೀನಾ: ವಿ.ವಿ. ಪ್ರಯೋಗಾಲಯದಲ್ಲಿ ಸ್ಫೋಟ– ಮೂವರು ವಿದ್ಯಾರ್ಥಿಗಳ ಸಾವು

share with us

ಬೀಜಿಂಗ್‌: 26 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಜಿಯಾಟಾಂಗ್‌ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಬುಧವಾರ ಸ್ಫೋಟ ಸಂಭವಿಸಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವಿ.ವಿಯ ರಸಾಯನವಿಜ್ಞಾನ ಪ್ರಯೋಗಾಲಯದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಕುರಿತು ಮೂವರು ವಿದ್ಯಾರ್ಥಿಗಳು ಪ್ರಯೋಗ ನಡೆಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಪೋಟದ ಪರಿಣಾಮ ಪ್ರಯೋಗಾಲಯದ ಕಟ್ಟಡಕ್ಕೆ ಬೆಂಕಿ ಹಿಡಿದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا