Urdu   /   English   /   Nawayathi

ರೊಚ್ಚಿಗೆದ್ದ ಮೀನುಗಾರರು, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

share with us

ಉಡುಪಿ: 06 ಜನುವರಿ (ಫಿಕ್ರೋಖಬರ್ ಸುದ್ದಿ) ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣ ಖಂಡಿಸಿ ಕರಾವಳಿ ಜಿಲ್ಲೆಯ ಸಾವಿರಾರು ಮೀನುಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ತಡೆದ ಮೀನುಗಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು. ಡಿಸೆಂಬರ್ ತಿಂಗಳಲ್ಲಿ ಮಲ್ಪೆ ಬಂದರಿಗೆ ಮೀನುಗಾರಿಕೆಗೆ ಮೀನುಗಾರರು ತೆರಳಿದ್ದರು. ಅವರಲ್ಲಿ ಏಳು ಮಂದಿ ನಾಪತ್ತೆಯಾಗಿದ್ದು, ಈವರೆಗೆ ಅವರು ಏನಾಗಿದ್ದರೆಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕೇಂದ್ರ, ರಾಜ್ಯ ಸರ್ಕಾರಗಳು ಮೀನುಗಾರರ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಧರಣಿ, ರಸ್ತೆತಡೆಯ ಹಿನ್ನೆಲೆಯಲ್ಲಿ ಅಂಬಲಪಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಮಿಸುವ ವಾಹನಗಳ ಸಂಚಾರಕ್ಕೆ ಪೊಲೀಸರು ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಕ್ಕೂ ಮೊದಲು ಮಲ್ಪೆ ಬಂದರ್‌ನಿಂದ ಕರಾವಳಿ ಬೈಪಾಸ್ ವರೆಗೆ ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಸೇರಿ ಬೃಹತ್ ಮೆರವಣಿಗೆ ನಡೆಸಿದರು.

ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಗೆ ಸಂಘದ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖಂಡರಾದ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿ. ಶಂಕರ್, ಆರ್.ಕೆ.ಗೋಪಾಲ್, ಯು.ಆರ್.ಸಭಾಪತಿ, ಲಾಲಾಜಿ ಮೆಂಡನ್, ಉದಯ ಕುಮಾರ್, ಶೆಟ್ಟಿ, ಯಶ್ಪಾಲ್ ಸುವರ್ಣ ಮತ್ತಿತರರು ಸಾಥ್ ನೀಡಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا