Urdu   /   English   /   Nawayathi

ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್!

share with us

ಬೆಂಗಳೂರು: 10 ಜನುವರಿ (ಫಿಕ್ರೋಖಬರ್ ಸುದ್ದಿ) ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ ನಾಗೇಂದ್ರ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಆನಂದ್ ಸಿಂಗ್ ಹಾಗೂ ನಾಗೇಂದ್ರ ಅವರು ಕೋರ್ಟ್ ಗೆ ಗೈರಾಗಿದ್ದರಿಂದ ಇಂದು ನ್ಯಾಯಾಧೀಶ ಬಿವಿ ಪಾಟೀಲ್ ಅವರು ಇಬ್ಬರ ವಿರುದ್ಧ ವಾರೆಂಟ್ ಜಾರಿ ಮಾಡಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا