Urdu   /   English   /   Nawayathi

ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ ಜಾರಿಗೊಳಿಸಿದ ಗುಜರಾತ್

share with us

ಅಹಮದಾಬಾದ್: 14 ಜನುವರಿ (ಫಿಕ್ರೋಖಬರ್ ಸುದ್ದಿ) ಮೇಲ್ವರ್ಗದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 10ರಷ್ಟು ಮೀಸಲಾತಿ ನೀಡುವ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಬಾರಿಗೆ ಜಾರಿಗೊಳಿಸಲಾಗಿದೆ. ಈ ಮೂಲಕ ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಗೌರವಕ್ಕೆ ಪಾತ್ರವಾಗಿದೆ. ಮೇಲ್ವರ್ಗದ ಬಡವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸುವ ಮಸೂದೆಯನ್ನು ಕಳೆದ ವಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ಶನಿವಾರ ಈ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇಂದಿನಿಂದಲೇ ಗುಜರಾತ್ ನಲ್ಲಿ ಈ ಹೊಸ ಕಾನೂನು ಜಾರಿಗೆ ತರಲಾಗಿದೆ. ನಿನ್ನೆಯಷ್ಟೇ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಜನವರಿ 14ರಂದು ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದ್ದರು. 

ಗುಜರಾತ್ ಸರ್ಕಾರ ಜನವರಿ 14ರಿಂದ ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಜಾರಿಗೊಳಿಸುತ್ತಿದ್ದು, ಈಗ ನಡೆಯುತ್ತಿರುವ ಎಲ್ಲಾ ನೇಮಕಾತಿಯಲ್ಲೂ ಶೇ.10ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಗುಜರಾತ್ ಸಿಎಂ ಇಂದು ಟ್ವೀಟ್ ಮಾಡಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا