Urdu   /   English   /   Nawayathi

ಉತ್ತರ ಪ್ರದೇಶ: ಕುಂಭಮೇಳ ಆರಂಭಕ್ಕೂ ಮುನ್ನಾ ದಿನವೇ ಕ್ಯಾಂಪ್ ನಲ್ಲಿ ಅಗ್ನಿ ಅವಘಡ

share with us

ಪ್ರಯಾಗರಾಜ್: 14 ಜನುವರಿ (ಫಿಕ್ರೋಖಬರ್ ಸುದ್ದಿ) ಬಹು ನಿರೀಕ್ಷಿತ ಕುಂಭಮೇಳ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ದಿಗಂಬರ ಅಖಾರ ಕ್ಯಾಂಪ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ತಹಬಂದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಯಾವುದೇ ಅಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا