Urdu   /   English   /   Nawayathi

ಬೆಳಗಾವಿ: ಬೈಕ್-ಟ್ರ್ಯಾಕ್ಟರ್ ಡಿಕ್ಕಿ, ರಜೆಗೆ ಊರಿಗೆ ಬಂದಿದ್ದ ಸೈನಿಕ ದುರ್ಮರಣ!

share with us

ಬೆಳಗಾವಿ: 19 ಜನುವರಿ (ಫಿಕ್ರೋಖಬರ್ ಸುದ್ದಿ) ಟ್ರ್ಯಾಕ್ಟರ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಸೈನಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಗರಮುನ್ನೋಳಿ ಗ್ರಾಮ ನಿವಾಸಿ ಸಿಕಂದರ್ ಮುಲ್ತಾನಿ (28) ಮೃತ ಸೈನಿಕರಾಗಿದ್ದು ಇವರು 40 ದಿನಗಳ ಕಾಲ ರಜೆ ಪಡೆದು ಊರಿಗೆ ಬಂದಿದ್ದರು. ಸಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸೈನಿಕ ಸಿಕಂದರ್ ಮುಲ್ತಾನಿ ಪಕ್ಕದ ಗ್ರಾಮಕ್ಕೆ ಜಾತ್ರೆಗೆಂದು ಹೋದವರು ತಡರಾತ್ರಿ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಪ್ರಯತ್ನಿಸಿದಾಗ ಬೈಕ್ ಟ್ರ್ಯಾಕ್ಟರ್ ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸಿಕಂದರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸಿಕಂದರ್ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಆಫ್ ಸೆಂಟರ್ ಪಂಜಾಬ್ ನಲ್ಲಿ ಒಂಬತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ವಿವಾಹವಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಚಿಕ್ಕೋಡಿ ಪೊಲೀಸರುಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا