Urdu   /   English   /   Nawayathi

ನಾಯಿ ಅಡ್ಡ ಬಂದು ಆಟೋ ಪಲ್ಟಿ: ಸ್ಥಳದಲ್ಲೇ 3 ವರ್ಷದ ಮಗು ಸಾವು

share with us

ಚಿಕ್ಕಮಗಳೂರು: 26 ಜನುವರಿ (ಫಿಕ್ರೋಖಬರ್ ಸುದ್ದಿ) ಆಟೋ ಪಲ್ಟಿಯಾಗಿ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಾಳೆಹೊನ್ನೂರಿನ ಅಕ್ಷಯ ನಗರದಲ್ಲಿ ಆಟೋ ಹೋಗುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿಯಾಗಿದೆ. ಘಟನೆಯಲ್ಲಿ ಮಹಮ್ಮದ್ ಅಬೂಬಕರ್ ಎಂಬ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನೂ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಾಳಾಗಿದ್ದು, ಗಾಯಾಳುಗಳನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا