Urdu   /   English   /   Nawayathi

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ವಶ

share with us

ಕಾರವಾರ: 28 ಜನುವರಿ (ಫಿಕ್ರೋಖಬರ್ ಸುದ್ದಿ) ಕಾರವಾರದ ಮಜಾಳಿ ಮೀನು ಮಾರುಕಟ್ಟೆಯ ಬಳಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಗೋವಾ ಮದ್ಯದ ಜೊತೆಗೆ ಆರೋಪಿಯನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಆರೋಪಿ ಶ್ರೀಕಾಂತ್ ತನ್ನ ದ್ವಿಚಕ್ರ ವಾಹನದಲ್ಲಿ ಮಾಜಾಳಿಯಿಂದ ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದು, ಮಾಹಿತಿ ದೊರಕಿದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 39,000 ರೂ ಮೌಲ್ಯದ 34 ಲೀಟರ್ ಗೋವಾ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳನ್ನು ಕಂಡ ಆರೋಪಿ ತಕ್ಷಣ ವಾಹನ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.

Prayer Timings

Fajr فجر
Dhuhr الظهر
Asr أسر
Maghrib مغرب
Isha عشا