Urdu   /   English   /   Nawayathi

ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾರತಕ್ಕೆ ಹಸ್ತಾಂತರ

share with us

ದುಬೈ/ನವದೆಹಲಿ: 31 ಜನುವರಿ (ಫಿಕ್ರೋಖಬರ್ ಸುದ್ದಿ) ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸಂಯುಕ್ತ ಗಣರಾಜ್ಯ(ಯುಎಇ) ಸರ್ಕಾರ ಭಾರತಕ್ಕೆ ಗಡಿಪಾರು ಮಾಡಿದೆ. ಮೂಲಗಳ ಪ್ರಕಾರ, ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಮಧ್ಯವರ್ತಿ, ಆರೋಪಿ ಕ್ರಿಶ್ಚಿಯನ್ ಮೈಕೆಲ್‍ನನ್ನು ದುಬೈನಿಂದ ಗಡಿಪಾರು ಮಾಡಿದ ಎರಡು ತಿಂಗಳ ಬಳಿಕ ಮತ್ತಿಬ್ಬರು ಆರೋಪಿಗಳನ್ನು ಯುಎಇದಿಂದ ಭಾರತಕ್ಕೆ ಕರೆತರಲಾಗಿದೆ. ಹಗರಣದ ಪ್ರಮುಖ ಆರೋಪಿಗಳು ಎನ್ನಲಾದ ದುಬೈ ಮೂಲದ ಅಕೌಂಟೆಂಟ್ ರಾಜೀವ್ ಸಕ್ಸೇನಾ ಹಾಗೂ ದೀಪಕ್ ತಲ್ವಾರ್ ಅವರನ್ನು ಯುಎಇ ಭಾರತಕ್ಕೆ ಹಸ್ತಾಂತರಿಸಿದ್ದು, ಅವರನ್ನು ವಿಶೇಷ ವಿಮಾನದ ಮೂಲಕ ಜಾರಿ ನಿರ್ದೇಶನಾಲಯ, ವಿದೇಶಾಂಗ ಸಚಿವಾಲಯ ಹಾಗೂ ಸಂಶೋಧನೆ ಮತ್ತು ವಿಶ್ಲೇಷಣೆ ದಳದ(ರಿಸರ್ಚ್ ಆ್ಯಂಡ್ ಅನಲಿಸಿಸ್ ವಿಂಗ್-ರಾ) ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ದುಬೈನಲ್ಲಿ ವಾಸವಾಗಿದ್ದ ಅಕೌಂಟೆಂಟ್ ರಾಜೀವ್‍ಗೆ ಅಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಹಲವು ಬಾರಿ ಅವರಿಗೆ ಸಮನ್ಸ್ ನೀಡಿತ್ತು. ಆದರೆ, ಅವರು ತನಿಖೆಗೆ ಸಹಕರಿಸಿರಲಿಲ್ಲ. ಈಗ ರಾಜೀವ್ ಸಕ್ಸೇನಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ದುಬೈನಿಂದ ಕರೆದುಕೊಂಡು ಬರಲಾಗಿದೆ. ರಾಜೀವ್ ಸಕ್ಸೇನಾ ಹಾಗೂ ಪತ್ನಿ ಶಿವಾನಿ ಸಕ್ಸೇನಾ ಮತ್ತು ಅವರ ದುಬೈ ಮೂಲದ ಸಂಸ್ಥೆ ಷೇರುಗಳ ವಿಚಾರದಲ್ಲಿ ಅಕ್ರಮ ನಡೆಸಿದ್ದು, ಶಿವಾನಿ ಸಕ್ಸೇನಾ ಅವರನ್ನು 2017ರಲ್ಲಿ ಚೆನ್ನೈ ಏರ್ ಪೋರ್ಟ್‍ನಲ್ಲಿ ಬಂಧಿಸಲಾಗಿತ್ತು. ಸದ್ಯ ಅವರು ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا