Urdu   /   English   /   Nawayathi

ಭಾರೀ ಮಳೆ,ಪ್ರವಾಹಕ್ಕೆ ಆಸ್ಟ್ರೇಲಿಯಾ ತತ್ತರ;ರಸ್ತೆಗಳಲ್ಲಿ ಮೊಸಳೆ,ಹಾವು

share with us

ಸಿಡ್ನಿ: 05 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಭಾರೀ ಮಳೆಯಿಂದಾಗಿ ಆಸ್ಟ್ರೇಲಿಯಾ ಈಶಾನ್ಯ ಭಾಗ ಪ್ರವಾಹದಿಂದ ತತ್ತರಿಸಿಹೋಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೇ ರಸ್ತೆಗಳಲ್ಲಿ ಮೊಸಳೆ, ಹಾವುಗಳು ಪ್ರತ್ಯಕ್ಷವಾಗುವ ಮೂಲಕ ಜನರು ಭಯಭೀತರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಆಸ್ಟ್ರೇಲಿಯಾದಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಮತ್ತಷ್ಟು ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಕ್ವೀನ್ಸ್ ಲ್ಯಾಂಡ್ ರಾಜ್ಯದ ಟೌನ್ಸ್ ವಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮನೆಗಳಲ್ಲಿ ಸುರಕ್ಷಿತವಾಗಿ ಹೊರಬರುವಂತೆ ಹಗ್ಗಗಳನ್ನು ಇಳಿಬಿಡಲಾಗಿದೆ ಎಂದು ವರದಿ ವಿವರಿಸಿದೆ.

ಭಾರೀ ಮಳೆಯಿಂದಾಗಿ ರೋಸ್ ರಿವರ್ ಡ್ಯಾಂನ ಗೇಟ್ ಗಳನ್ನು ತೆರದು ಸುಮಾರು 1,900 ಕ್ಯೂಬಿಕ್ ಮೀಟರ್ ನಷ್ಟು ನೀರನ್ನು ಹೊರಬಿಟ್ಟಿದ್ದು, ಇದರಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ನೂರು ಮಿಲಿ ಮೀಟರ್ ನಷ್ಟು ಮಳೆ ಸುರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿ ತಿಳಿಸಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا