Urdu   /   English   /   Nawayathi

ಮೋದಿ ವರ್ಸಸ್ ದೀದಿ: ಸಿಬಿಐ ಎದುರು ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಗೆ 'ಸುಪ್ರೀಂ' ನಿರ್ದೇಶನ

share with us

ಕೊಲ್ಕತ್ತಾ: 05 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಸಂವಿಧಾನ ಉಳಿಸಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದ್ದು, ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ  ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ಸಿಬಿಐಗೆ ಸಹಕಾರ ನೀಡುವಂತೆಯೂ ಸೂಚಿಸಿದೆ.ಈ ಮಧ್ಯೆ ಮಧ್ಯಂತರ ಪರಿಹಾರ ಕೋರಿ ರಾಜೀವ್ ಕುಮಾರ್ ಕಲ್ಕತ್ತಾ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಲಾಗಿದೆ.ಶಾರದಾ ಹಾಗೂ ರೋಸ್ ವ್ಯಾಲಿ ಚಿಟ್ ಫಂಡ್ ಪ್ರಕರಣಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಇವುಗಳ ವಿದ್ಯುನ್ಮಾನ ಸಾಕ್ಷ್ಯಗಳನ್ನು ನಾಶಪಡಿಸಲು  ಕುಮಾರ್  ಪ್ರಯತ್ನಿಸುತ್ತಿದ್ದಾರೆ ಎಂದು ಸಿಬಿಐ ಆರೋಪಿಸಿದೆ.ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಸಿಬಿಐ ತಂಡ ಭಾನುವಾರ ಪೋಲಿಸ್ ಕಮಿಷನರ್ ರಾಜೀವ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಬಳಿಕ ಕೋಲ್ಕತ್ತ ಪೊಲೀಸರು ಐದು ಸಿಬಿಐ ಅಧಿಕಾರಿಗಳನ್ನು ಬಂಧಿಸಿದ್ದರು. ನಂತರ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ ಆರಂಭಿಸಿದ್ದಾರೆ.ಈ ಮಧ್ಯೆ ನ್ಯಾಯಾಲಯ ಹಾಗೂ ಎಲ್ಲಾ ಸಂಸ್ಥೆಗಳ ಬಗ್ಗೆ ಅಪಾರ ಗೌರವವಿದೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಬದ್ಧರಾಗಿರುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.ನ್ಯಾಯಾಂಗ ನಿಂದನೆ ಅರ್ಜಿ ಆಧಾರದಲ್ಲಿ ಪಶ್ಟಿಮ ಬಂಗಾಳ ಸರ್ಕಾರ, ಡಿಜಿಪಿ ಹಾಗೂ ಕೊಲ್ಕತ್ತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೆ ಮಾಡಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ.ಶಿಲ್ಲಾಂಗ್ ನಲ್ಲಿ ಸಿಬಿಐ ಮುಂದೆ ರಾಜೀವ್ ಕುಮಾರ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ANI✔@ANI

Union Min RS Prasad: This order was given by SC to investigate the conspiracy angle & also money laundering angle. This investigation must be done in a fair manner. Let's not politicise it. This is a great moral victory for CBI.

ANI✔@ANI

Union Min RS Prasad: Today we've to ask larger questions on behalf of the party. Lakhs of small investors were cheated&looted off their money. Is it not our moral obligation for an investigation? Why is Mamata ji silent on this? Why are the other political parties silent on this?

View image on Twitter

297

11:47 AM - Feb 5, 2019

Twitter Ads info and privacy

95 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا