Urdu   /   English   /   Nawayathi

ಕಮರಿಗೆ ಬಸ್ ಬಿದ್ದು 33 ಮಂದಿಗೆ ಗಾಯ

share with us

ಹಿಮಾಚಲಪ್ರದೇಶ(ಪಿಟಿಐ): 05 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಚಾಲಕನ ನಿಯಂತ್ರಣ ತಪ್ಪಿದ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ 33 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಪಲಾಂಪುರ್‍ನಲ್ಲಿ ಸಂಭವಿಸಿದೆ. ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯ ಗೋಪಾಲಪುರದಿಂದ ಹೊರಟ ಬಸ್ ಪಲಾಂಪುರ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೋಲೀಸರು ಹಾಗೂ ಅಗ್ನಿ ಶಾಮಕದಳದವರು ಗಾಯಾಳುಗಳನ್ನು ತಂಡಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಗಾಯಗೊಂಡವರ ಪೈಕಿ 7 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಪಲಾಂಪುರ್ ಪ್ರದೇಶದ ರಸ್ತೆಯು ಅತ್ಯಂತ ಕಿರಿದಾಗಿದ್ದು ಆಗಾಗ್ಗೆ ಅಪಘಾತಗಳು  ಸಂಭವಿಸುತ್ತಿದ್ದು ಹಲವರು ಜೀವವನ್ನು ಕಳೆದುಕೊಂಡಿದ್ದಾರೆ.

ಈ, ಸಂ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا