Urdu   /   English   /   Nawayathi

2ನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ: ಇಡಿ ಅಧಿಕಾರಿಗಳಿಂದ ಹೆಚ್ಚಿನ ತನಿಖೆ

share with us

ದೆಹಲಿ: 07 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಬ್ಬರು ಉಪ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರನ್ನೊಳಗೊಂಡ ತಂಡದಿಂದ ರಾಬರ್ಟ್ ವಾದ್ರಾ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬುದು ಇಡಿ ಮೂಲಗಳಿಂದ ತಿಳಿದುಬಂದಿದೆ. ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ ಅವರ ಬಾವಾ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ಆಗಿರುವ ರಾಬರ್ಟ್ ವಾದ್ರಾ ಬುಧವಾರ ಐದೂವರೆ ತಾಸುಗಳ ಕಾಲ  ವಿಚಾರಣೆ ಎದುರಿಸಿದ್ದರು. ಮತ್ತೆ ಇಂದು ಬೆಳಗ್ಗೆ 11-25ಕ್ಕೆ  ಕೇಂದ್ರ ದೆಹಲಿಯ ಜಾಜ್ ನಗರ್ ಹೌಸ್ ನಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ರಾಬರ್ಟ್ ವಾದ್ರಾ ಅವರನ್ನು ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಲಂಡನ್ ನಲ್ಲಿರುವ ಸ್ಥಿರ ಆಸ್ತಿಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು,ಇಂದು ಸಹ ರಾಬರ್ಟ್ ವಾದ್ರಾ  ಅವರನ್ನು ವಿಚಾರಣೆ ನಡೆಸಲಾಗುತ್ತಿದೆ.ಫೆಬ್ರವರಿ 12 ರಂದು ಜೈಪುರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ರಾಬರ್ಟ್ ಅವರಿಗೆ ಸೂಚಿಸಲಾಗಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا