Urdu   /   English   /   Nawayathi

ಕಾರವಾರದ ಮುದಗಾ ಬಳಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಮಹಿಳೆ

share with us

ಕಾರವಾರ: 09 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಕಾರವಾರ ತಾಲೂಕಿನ ಮುದಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಮಾರುತಿ ಓಮ್ನಿಯ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಶಾಫಿ ಮುಹಮ್ಮದ್ ಸೈಯದ್(65) ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಓಮ್ನಿಯ ಚಾಲಕ ಝುಬೇರ್, 2 ವರ್ಷದ ಮಗು ಮತ್ತು ಮೀನಾಕ್ ಬೋಪೆರ್ ಎಂಬುವವರು ಗಾಯಗೊಂಡಿದ್ದಾರೆ. ಗೋವಾದಿಂದ ಅಂಕೋಲಾದ ಕಡೆಗೆ ಬರುವಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا