Urdu   /   English   /   Nawayathi

ಭಯದಿಂದ ನನ್ನನ್ನು ತಡೆಯಲಾಗಿದೆ: ಯೋಗಿಗೆ ಅಖಿಲೇಶ್ ಯಾದವ್ ತಿರುಗೇಟು

share with us

ಲಖನೌ: 12 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ನಾನು ಅಲಹಬಾದ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದರಿಂದ ಹಿಂಸಾಚಾರ ಸಂಭವಿಸಬಹುದು ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ 'ಹೆದರಿಕೆ ಮರೆಮಾಚುವಂತಿದೆ' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಹೇಳಿದ್ದಾರೆ. ವಿದ್ಯಾರ್ಥಿ ಘಟಕದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದ ವಿಚಾರದಲ್ಲಿ ಸರ್ಕಾರ ಭಯಭೀತಿಗೊಂಡಿದೆ. ಅದಕ್ಕಾಗಿಯೇ ನನ್ನನ್ನು ಏರ್​ಪೋರ್ಟ್​ನಲ್ಲಿ ತಡೆಯಲಾಗಿದೆ ಎಂದು ಅಖಿಲೇಶ್ ಯಾದವ್ ತಿರುಗೇಟು ನೀಡಿದ್ದಾರೆ. ಯಾವುದೇ ಸ್ಪಷ್ಟ ಕಾರಣ ನೀಡದಯೇ ನಾನು ಅಲಹಬಾದ್ ವಿಮಾನ ಹತ್ತುವದನ್ನು ಪೊಲೀಸರು ತಡೆದರು. ಆದರೆ ಮುಖ್ಯಮಂತ್ರಿಗಳು ತಮ್ಮ ದುರ್ಬಲತೆಯನ್ನು ಮರೆಮಾಚಲು ಕಾನೂನು ಸುವ್ಯವಸ್ಥೆಗೆ ತಕ್ಕೆ ತರುವ ಸಾಧ್ಯತೆ ಇದೆ. ಹಿಂಸಾಚಾರ ನಡೆಯಬಹುದು ಎಂದು ಹೇಳಿರುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಬಿಜೆಪಿ ಉತ್ತರ ಪ್ರದೇಶವನ್ನು ಕಳೆದುಕೊಂಡಿದೆ. ಚುನಾವಣೆಗಿಂತ ಹೆಚ್ಚು, ಅವರು ಈ ದೇಶದ ಯುವಕರು ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದರು. ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಮುಖಂಡನ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಅಖಿಲೇಶ್ ಯಾದವ್ ತೆರಳುತ್ತಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಪೊಲೀಸರು ಅವರನ್ನು ತಡೆದಿದ್ದು, ಈ ವಿಚಾರ ಇದೀಗ ಉತ್ತರ ಪ್ರದೇಶ ಮಾತ್ರವಲ್ಲದೇ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا