Urdu   /   English   /   Nawayathi

ಉಗ್ರರ ದಾಳಿಗೆ ಪ್ರತೀಕಾರವಾಗಿ ಮುಂದಿನ ಕ್ರಮಗಳ ಚರ್ಚೆಗೆ ಸರ್ವಪಕ್ಷ ಸಭೆ ಆರಂಭ

share with us

ನವದೆಹಲಿ: 16 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಜಮ್ಮು ಕಾಶ್ಮೀರದ ಅವೋಂತಿಪೊರದಲ್ಲಿ ಉಗ್ರರು ನಡೆಸಿದ ದಾಳಿ ಸಂಬಂಧ ಮುಂದಿನ ಹೆಜ್ಜೆಯಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ಅವರ ನೇತೃತ್ವದಲ್ಲಿ ಶನಿವಾರ ಸರ್ವಪಕ್ಷ ಸಭೆ ಆರಂಭವಾಗಿದೆ. ಸಂಸತ್‌ನಲ್ಲಿ ನಡೆಯುತ್ತಿರುವ ಸಭೆಗೆ ಆಡಳಿತ ಪಕ್ಷ ಬಿಜೆಪಿ ಕಾಂಗ್ರೆಸ್‌ ಜೆಡಿಯು ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‌ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ

View image on TwitterView image on TwitterView image on Twitter

ANI✔@ANI

Delhi: All party meeting called by central govt. underway at the Parliament.

1,683

11:27 AM - Feb 16, 2019

259 people are talking about this

Twitter Ads info and privacy

ಪಕ್ಷ ಬೇಧ ಮರೆತು ಸರ್ವರೂ ಒಮ್ಮತದಿಂದ ರಾಷ್ಟ್ರ ರಕ್ಷಣೆಗಾಗಿ ಕ್ರಮಕ್ಕೆ ಮುಂದಾಗಬೇಕು ಎಂಬ ಆಶಯದಲ್ಲಿದ್ದಾರೆ. ಉಗ್ರರ ದಾಳಿ ಘಟನೆ ಬಳಿಕ ನಿನ್ನೆಯಷ್ಟೇ ರಾಜನಾಥ ಸಿಂಗ್‌ ಅವರು ಶ್ರೀನಗರಕ್ಕೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ, ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದರು. ಅಧಿಕಾರಿಗಳಿಂದ ಪರಿಸ್ಥಿತಿಯ ಮಾಹಿತಿ ಪಡೆದಿದ್ದರು. ಬಳಿಕ, ಆಸ್ಪತ್ರೆಗೆ ತೆರಳಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧರ ಯೋಗಕ್ಷೇಮನ್ನು ವಿಚಾರಿಸಿದ್ದರು. ರಾತ್ರಿ ದೆಹಲಿಯ ಪಾಲಂ ವಿಮಾನನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.

ಪ್ರ, ವಾ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا