Urdu   /   English   /   Nawayathi

ಪಾದ್ರಿಗೆ 20 ವರ್ಷ ಸಜೆ

share with us

ತಿರುವನಂತಪುರಂ: 17 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಕೇರಳದ ಕೊಟ್ಟಿಯೂರಿನಲ್ಲಿ ನಡೆದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ, ಫಾದರ್‌ ರಾಬಿನ್‌ ವಡಕ್ಕಂಚೇರಿ ಅವರಿಗೆ ಕೋರ್ಟ್‌ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ಪೋಸ್ಕೊ ಕಾಯ್ದೆ ಅಡಿ ಈ ಪ್ರಕರಣದ ವಿಚಾರಣೆ ನಡೆಸಿದ ತಲಶೆರಿಯ ಹೆಚ್ಚುವರಿ ಜಿಲ್ಲಾ ಕೋರ್ಟ್‌, ಫಾದರ್‌ ರಾಬಿನ್‌ ತಪ್ಪಿತಸ್ಥ ಎಂದು ಹೇಳಿದೆ. ಜೊತೆಗೆ, ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಇತರೆ 6 ಮಂದಿಯನ್ನು ಕೋರ್ಟ್‌ ಖುಲಾಸೆಗೊಳಿಸಿದೆ. ಈ ಪ್ರಕರಣ 2016ರ ಮೇ ತಿಂಗಳಲ್ಲಿ ನಡೆದಿತ್ತು. 16 ವರ್ಷ ವಯಸ್ಸಿನ ಸಂತ್ರಸ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿತ್ತು. 2017ರ ಫೆ.28ರಂದು ರಾಬಿನ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا