Urdu   /   English   /   Nawayathi

ಶಿವಮೊಗ್ಗದಲ್ಲಿ ಬೈಕ್​​​​​ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

share with us

ಶಿವಮೊಗ್ಗ: 17 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಬೈಕ್ ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಪೆಸಿಟ್ ಕಾಲೇಜು ಬಳಿ ನಡೆದಿದೆ. ಭದ್ರಾವತಿ ತಾಲೂಕು ಸಿಂಗನಮನೆ ಗ್ರಾಮ ಪಂಚಾಯತ್​ ಸದಸ್ಯ ವೀರಭದ್ರಪ್ಪ (52) ಹಾಗೂ ಹೊರಬೈಲಿನ ಮಂಜುನಾಥ( 50) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದವೈವಿಗಳು. ಮೃತರು ಗುಡ್ಡದ ಹರಕೆರೆಯ ತಮ್ಮ ಸಂಬಂಧಿಕರ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದರು. ಆಗ ರಸ್ತೆ ತಿರುವು ದಾಟುವಾಗ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا