Urdu   /   English   /   Nawayathi

ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ - ರಾಹುಲ್ ಗಾಂಧಿ

share with us

ನವದೆಹಲಿ: 23 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ದೇಶದಲ್ಲಿನ ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಈ ವಿಚಾರವಾಗಿ ಯುವಜನಾಂಗದ ಜೊತೆ ಪ್ರಧಾನಿ ಚರ್ಚೆ ನಡೆಸಬೇಕು ಎಂದಿದ್ದಾರೆ. ಜವಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಾ, ದಶಾ ಮತ್ತು ದಿಶಾ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ದೇಶದ ಸಂಪತ್ತು ಕೆಲವೇ ಜನರ ಕೈಯಲ್ಲಿ ಕೇಂದ್ರೀಕೃತವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳ ಶಿಕ್ಷಣದ ಹೆಚ್ಚಿನ ಭಾಗವನ್ನು ರಾಜ್ಯವು ಪಾವತಿಸಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥರು ಪ್ರತಿಪಾದಿಸಿದ್ದಾರೆ. ಆದರೆ, ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಕಂಡುಬಂದಿಲ್ಲ. ಚೀನಾ ಆರ್ಥಿಕವಾಗಿ ಪ್ರಗತಿ ಹೊಂದುತ್ತಲೇ ಇದ್ದು, ದೇಶದಲ್ಲಿನ ಹಲವು ಉತ್ಪನ್ನಗಳ ಮೇಲೆ ಮೇಡ್ ಇನ್ ಚೀನಾ ಲೇಬಲ್ ಕಂಡುಬರುತ್ತದೆ. ಭಾರತವು ಚೀನಾವನ್ನು ಹಿಂದಿಕ್ಕೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಮನವರಿಕೆ ಮಾಡಿಕೊಟ್ಟರು.  ದೇಶದಲ್ಲಿ 1.2 ಬಿಲಿಯನ್ ಜನರಿದ್ದು, ಭಾರತ 24ಗಂಟೆಗೆ 450ಉದ್ಯೋಗವನ್ನು ಸೃಷ್ಟಿಸಿದ್ದರೆ ಚೀನಾ ಇದೇ ಅವಧಿಯಲ್ಲಿ 50ಸಾವಿರ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಇದು ತಮ್ಮ ಅಂಕಿ ಅಂಶವಲ್ಲಾ, ವಿತ್ತ ಸಚಿವಾಲಯ ಲೋಕಸಭೆಗೆ ನೀಡಿದ ಮಾಹಿತಿಯಾಗಿದೆ. ಆದರೆ, ಈ ಸಮಸ್ಯೆಯನ್ನು ಬಗೆಹರಿಸಲು ಪ್ರಧಾನಿ ಮೋದಿ ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು. ಏಲ್ಲಿ ಸಮಸ್ಯೆ ಇದೆಯೋ  ಅದನ್ನು ಬಗೆಹರಿಸಲು ಬೆಂಬಲ ನೀಡಬೇಕಾಗುತ್ತದೆ. ಕಾಂಗ್ರೆಸ್ ಅದರಲ್ಲಿ ನಂಬಿಕೆ ಹೊಂದಿದೆ. ರಾಫೆಲ್ ವಿವಾದ, ಭ್ರಷ್ಟಾಚಾರ, ಉದ್ಯೋಗ ಮತ್ತಿತರ ವಿಷಯಗಳ ಕುರಿತ ಚರ್ಚೆಗೆ ಪ್ರಧಾನಿ ಮೋದಿಗೆ ಈಗಾಗಲೇ ಸವಾಲು ಹಾಕಿರುವುದಾಗಿ ರಾಹುಲ್ ಗಾಂಧಿ ಹೇಳಿದರು. ದೇಶದಲ್ಲಿನ ನಿರುದ್ಯೋಗ ಸಮಸ್ಯೆ ಕುರಿತಂತೆ ಪ್ರಧಾನಿ ಮೋದಿ, ಯುವಜನಾಂಗದೊಂದಿಗೆ ಸಂವಾದ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸಬೇಕಾಗಿದೆ. ಈ ವಿಚಾರದಲ್ಲಿ ಚರ್ಚೆ ನಡೆದರೆ ಅಗತ್ಯ ಬೆಂಬಲ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا