Urdu   /   English   /   Nawayathi

ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಒಂದೇ ಕುಟುಂಬದ ಐವರ ಸಾವು

share with us

ಬಂಡಾ: 04 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಹದಿನೈದು ಮಂದಿ ಪ್ರಯಾಣಿಸುತ್ತಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದು. 10ಮಂದಿಗೆ ಗಾಯಗೊಂಡಿರುವದು ಘಟನೆ ರಾತ್ರಿ ಉತ್ತರಪ್ರದೇಶದ ಫತ್ತೇಪುರ್ ಜಿಲ್ಲೆಯಲ್ಲಿ ನಡೆದಿದೆ.  ತಡರಾತ್ರಿ 15ಮಂದಿ ಇದ್ದ ವಾಹನ ಉತ್ತರಪ್ರದೇಶ ಹುಸೈನ್‍ಗಾಜಾ ಪ್ರದೇಶದಲ್ಲಿ ಬರುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಪೂಜಾ ಜಾಧವ್ ಸ್ಪಷ್ಟಪಡಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7ಮಂದಿ ಸದಸ್ಯರಾದ ರಮೇಶ್(45), ಆರತಿ(20), ಪ್ರಿಯಾ(5), ಸೋನಂ(8) ಮತ್ತು ನೇಹಾ(14) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹತ್ತು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ, ಸಂ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا