Urdu   /   English   /   Nawayathi

ರಫೇಲ್ ಹಗರಣದಲ್ಲಿ ಮೋದಿ ವಿರುದ್ಧ ತನಿಖೆಗೆ ರಾಹುಲ್ ಆಗ್ರಹ

share with us

ನವದೆಹಲಿ: 07 ಮಾರ್ಚ್ (ಫಿಕ್ರೋಖಬರ್ ಸುದ್ದಿ) ರಫೇಲ್ ಯುದ್ಧ ವಿಮಾನ ಒಪ್ಪಂದದ ಎಲ್ಲ ವ್ಯವಹಾರಗಳನ್ನು ಪ್ರಧಾನಿ ಕಾರ್ಯಾಲಯವೇ ನೋಡಿಕೊಂಡಿದ್ದು, ಇದೀಗ ಅದರ ದಾಖಲೆ ನಾಪತ್ತೆಯಾಗಿದೆ ಎನ್ನುವ ಮೂಲಕ ಸರ್ಕಾರ ಹಗರಣವನ್ನು ಒಪ್ಪಿಕೊಂಡಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಹಗರಣದ ಎಲ್ಲರ ವಿರುದ್ಧ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸೇರಿದಂತೆ ಈ ಹಗರಣದಲ್ಲಿ ಶಾಮೀಲಾದವರ ವಿರುದ್ಧ ಎಫ್‍ಐಆರ್ ದಾಖಲಿಸುವ ಕಾಲ ಸನ್ನಿಹಿತವಾಗಿದೆ ಎಂದರು. ಈ ಪ್ರಕರಣದಲ್ಲಿ ಅನೇಕ ಸಂಸ್ಥೆಗಳನ್ನು ಮೋದಿ ದುರುಪಯೋಗ ಪಡಿಸಿಕೊಂಡು ಬೈಪಾಸ್ ಸರ್ಜರಿ ಮಾಡಿದ್ದಾರೆ. ಅಲ್ಲದೆ, ತಮ್ಮ ಪರಮಾಪ್ತ ಮಿತ್ರ ಮತ್ತು ಉದ್ಯಮಿ ಅನಿಲ್‍ಅಂಬಾನಿಗೆ ಅನುಕೂಲ ಕಲ್ಪಿಸಲು ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ಪುನರುಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಬಳಿ ತಮ್ಮನ್ನು ಸಾಬೀತುಪಡಿಸಿಕೊಳ್ಳಲು ಯಾವುದೇ ಸಾಕ್ಷ್ಯಾಧಾರವಿಲ್ಲ. ರಫೇಲ್ ಹಗರಣ ಮೋದಿಯೊಂದಿಗೆ ಶುರುವಾಗಿ ಮೋದಿಯೊಂದಿಗೆ ಕೊನೆಗೊಳ್ಳಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ರಕ್ಷಣಾ ಸಚಿವಾಲಯದಿಂದಲೇ ಕಳುವಾಗಿದೆ. ಈ ಕುರಿತು ನಾವು ಸದ್ಯದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು. ಇಲಾಖೆಯ ಮಾಜಿ ಅಥವಾ ಹಾಲಿ ಅಧಿಕಾರಿಗಳೇ ಈ ದಾಖಲೆಗಳನ್ನು ಕದ್ದಿರಬಹುದು, ನಾವು ಈಗಾಗಲೇ ಈ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಕೇಂದ್ರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದ್ದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا