Urdu   /   English   /   Nawayathi

ಮುಖ್ಯಮಂತ್ರಿ ಕಾರಿಗೆ 300 ದಂಡ

share with us

ಬೆಂಗಳೂರು: 18 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಖಾಸಗಿ ಕಾರಿನ ವಿರುದ್ಧ ಎರಡು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 300 ದಂಡ ವಿಧಿಸಿದ್ದಾರೆ. ಫೆ. 10 ರಂದು ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತ ಕಾರು ಓಡಿಸಿದ್ದ. ಫೆ. 12ರಂದು ಅತೀ ವೇಗದಲ್ಲಿ ಕಾರು ಚಲಾಯಿಸಿದ್ದ. ಈ ಎರಡೂ ಪ್ರಕರಣದಲ್ಲೂ ದಂಡ ವಿಧಿಸಲಾಗಿದ್ದು, ಇದುವರೆಗೂ ದಂಡದ ಮೊತ್ತವನ್ನು ಪಾವತಿಸಿಲ್ಲ. ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ನಗರದಲ್ಲಿ ಸ್ವಯಂಚಾಲಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅದರ ಮೂಲಕವೇ ಮುಖ್ಯಮಂತ್ರಿ ಕಾರಿಗೆ ದಂಡ ವಿಧಿಸಲಾಗಿದೆ. ಅದರ ಪಾವತಿಗಾಗಿ ಅಂಚೆ ಮೂಲಕ ನೋಟಿಸ್‌ ಕಳುಹಿಸಲಾಗಿದೆ’ ಎಂದು ಸಂಚಾರ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರ, ವಾ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا