Urdu   /   English   /   Nawayathi

ಲೋಕಸಭೆ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳು ನಿರ್ಣಾಯಕ ಪಾತ್ರ ವಹಿಸಲಿವೆ: ಐಟಿ ತಜ್ಞರು

share with us

ಹೈದರಾಬಾದ್: 19 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ತಂತ್ರಜ್ಞಾನ ಪ್ರಮುಖ ಸ್ಥಾನ ಅಲಂಕರಿಸಿದ್ದು, ಈ ಲೋಕಸಭೆ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳು ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಐಟಿ ತಜ್ಞರೊಬ್ಬರು ಹೇಳಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ತಂತ್ರಜ್ಞಾನ ಅಷ್ಟಾಗಿ ಬಳಕೆಯಾಗುತ್ತಿರಲಿಲ್ಲ. ಆದರೆ ಈ ಬಾರಿ ಸಾಮಾಜಿಕ ಮಾಧ್ಯಮಗಳು ಅತ್ಯಂತ ಪ್ರಬಲವಾಗಿದ್ದು, ಫಲಿತಾಂಶದ ಮೇಲೆ ಪರಿಣಾಮ ಬೀರಲಿವೆ ಎಂದು ಮಾಜಿ ಟೆಲಿಕಾಮ್ ಕಾರ್ಯದರ್ಶಿ ಮತ್ತು ಮಾಜಿ ನಾಸ್ಕಾಂ ಅಧ್ಯಕ್ಷ ಆರ್ ಚಂದ್ರಶೇಖರ್ ಅವರು ತಿಳಿಸಿದ್ದಾರೆ. ಈ ಬಾರಿ ಸಾಮಾಜಿಕ ಮಾಧ್ಯಮಗಳು ಕೇಂದ್ರ ಸ್ಥಾನ ಅಲಂಕರಿಸಿರುವುದರಿಂದ ರಾಜಕೀಯ ಪಕ್ಷಗಳ ಚುನಾವಣಾ ತಂತ್ರ ಮತ್ತು ಚುನಾವಣಾ ಪ್ರಕ್ರಿಯೆಯೂ ಬದಲಾಗಿದೆ ಎಂದು ಅವರು ಹೇಳಿದ್ದಾರೆ. ದೇಶದ ಯುವ ಜನತೆ ಸಾಮಾಜಿಕ ಮಾಧ್ಯಮಗಳನ್ನು ಹೆಚ್ಚು ಬಳಸುತ್ತಿದ್ದು, ಮೊದಲ ಬಾರಿಗೆ ಮತಹಾಕುವವರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ. ಸಾಮಾಜಿಕ ಮಾಧ್ಯಮ ಮತದಾರರ ಮೇಲೆ ಎಷ್ಟು ಪ್ರಮಾಣದಲ್ಲಿ ಪ್ರಭಾವ ಬೀರಲಿದೆ ಎಂದು ಖಚಿತವಾಗಿ ಹೇಳುವುದು ಕಷ್ಟ. ಆದರೆ ನಿರ್ಣಾಯಕ ಪಾತ್ರ ವಹಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಅವರು ಹೇಳಿದ್ದಾರೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ ಪ್ರಜಾತಂತ್ರದ ಪ್ರಮುಖ ಪ್ರಕ್ರಿಯೆ 'ಚುನಾವಣೆ' ಮುಂದಿನ ತಿಂಗಳು ನಡೆಯಲಿದೆ. ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರ ಮತ್ತು ಪ್ರಭಾವವನ್ನು ಅರಿಯುವ ಬಹು ದೊಡ್ಡ ಪರೀಕ್ಷೆಯಾಗಿಯೂ 2019ರ ಲೋಕಸಭಾ ಚುನಾವಣೆಯನ್ನು ಪರಿಗಣಿಸಲಾಗುತ್ತಿದೆ. ಫೇಸ್‌ಬುಕ್‌, ಟ್ವಿಟರ್‌ ಹಾಗೂ ವಾಟ್ಸ್‌ಆಪ್‌ ವೇದಿಕೆಗಳಲ್ಲಿ ನಡೆಯುವ ಪ್ರಚಾರ ಪ್ರಯತ್ನವೂ ಸಹ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುವುದಾಗಿ ವಿಶ್ಲೇಷಿಸಲಾಗುತ್ತಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا