Urdu   /   English   /   Nawayathi

ಅಭಿವೃದ್ಧಿ ನಿರ್ಲಕ್ಷ್ಯ: ಗದಗದ 2 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

share with us

ಗದಗ: 19 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಚುನಾವಣೆ ಮುಗಿದ ನಂತರ ಆಯ್ಕೆಯಾದ ಜನ ಪ್ರತಿನಿಧಿಗಳು ತಮ್ಮ ಹಳ್ಳಿಗಳ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಗದಗದ ಕಡಕೋಳ ಮತ್ತು ನಾರಾಯಣಪುರ ಗ್ರಾಮಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಸುಮಾರು 8ಸಾವಿರ ಜನಸಂಖ್ಯೆಯಿರುವ ಕಡಕೋಳ ಗ್ರಾಮ ಕಪ್ಪತಗುಡ್ಡದ ಬೆಟ್ಟದಲ್ಲಿದೆ, ಹಲವು ವರ್ಷಗಳಿಂದ ಇಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಕುಡಿಯುವ ನೀರಿನ ಸಮಸ್ಯೆ ಮತ್ತು ಆಸ್ಪತ್ರೆ ಸೌಲಭ್ಯಇಲ್ಲ. ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲೆಯ ಉನ್ನತ ಅಧಿಕಾರಿಗಳು ಹಲವು ಬಾರಿ ಭರವಸೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಅಧಿಕಾರಿಗಳ ಬೇಜವಬ್ದಾರಿ ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು ಏಪ್ರಿಲ್ 23 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಗ್ರಾಮದಲ್ಲಿಸುಮಾರು ಮೂರುವರೆ ಸಾವಿರ ಮತಗಳಿವೆ, ಹೀಗಾಗಿ ಇವರ ನಿರ್ಧಾರ ರಾಜಕೀಯ ಪಕ್ಷಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ದಾಂಬಾಲ್ ಬಳಿಯಿರುವ ನಾರಾಣಪುರ ಗ್ರಾಮವನ್ನು ಕಂದಾಯ ಗ್ರಾಮ ಎಂದು ಘೋಷಿಸಬೇಕು ಎಂಬುದು ಇವರ ಬೇಡಿಕೆಯಾಗಿದೆ, ಇಲ್ಲೂ ಕೂಡ ಮೂಲಭೂತ ಸೌಕರ್ಯಗಳಾದ ರಸ್ತೆ, ಸರಿಯಿಲ್ಲ, ಸುಮಾರು 400 ಜನಸಂಖ್ಯೆಯಿರುವ ಈ ಗ್ರಾಮದಲ್ಲೂ ಕೂಡ ಜನರು ಮತದಾನ ಬಹಿಷ್ಕರಿಸಿದ್ದಾರೆ. ಹೀರೇವಾದ್ದತ್ತಿ ಮುಖ್ಯರಸ್ತೆಯಿಂದ 3 ಕಿಮೀ ಕ್ರಮಿಸಿದರೇ ಈ ಗ್ರಾಮ ಸಿಗುತ್ತದೆ. ಕೇವಲ ಚುನಾವಣೆ ಸಮೀಪಿಸಿದಾಗ ಮಾತ್ರ ರಾಜಕಾರಣಿಗಳು ಇಲ್ಲಿಗೆ ಆಗಮಿಸುತ್ತಾರೆ ಎಂದು ದೂರಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا