Urdu   /   English   /   Nawayathi

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 2 ಸಾವು, 50ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ!

share with us

ಧಾರವಾಡ: 19 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಕರಿಗೆ ಸೇರಿದ ನಿರ್ಮಾಣದ ಹಂತದ ಐದು ಅಂತಸ್ತಿನ ಕಟ್ಟದ ಕುಸಿದಿದ್ದು ಪರಿಣಾಮ 2 ಸಾವನ್ನಪ್ಪಿದ್ದು 50ಕ್ಕೂ ಹೆಚ್ಚು ಜನರು ಅವಶೇಷದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಅವಘಡ ಸಂಭವಿಸಿದೆ. ಇನ್ನು ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಕಟ್ಟದ ಕುಸಿದಿದೆ ಎಂದು ಹೇಳಲಾಗುತ್ತಿದೆ. ಈ ಕಟ್ಟಡದ ಪಕ್ಕದಲ್ಲಿ ವಾಸಿಸುತ್ತಿದ್ದವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ರಕ್ಷಣಾ ಪಡೆ ಪೊಲೀಸರು, 20ಕ್ಕೂ ಹೆಚ್ಚು ಆಂಬ್ಯುಲೆನ್ಸ್, ನೂರಾರು ವೈದ್ಯಕೀಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಇದುವರೆಗೆ 10ಕ್ಕೂ ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು, ಗಾಯಗೊಂಡವರನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ  ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಬೆಂಗಳೂರಿನಿಂದ ವಿಶೇಷ ರಕ್ಷಣಾ ತಂಡವೊಂದನ್ನು ವಿಶೇಷ ವಿಮಾನದಲ್ಲಿ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. 

ಅಲ್ಲದೆ ಸುತ್ತಮುತ್ತಲಿನ ಆರೋಗ್ಯ ಕೇಂದ್ರ ಆಸ್ಪತ್ರೆಗಳ ವೈದ್ಯಕೀಯ ತಂಡಗಳನ್ನು ನಿಯೋಜಿಸಿ, ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಒದಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ. ಬೆಳಗಾವಿ, ಹಾವೇರಿ, ಗದಗ ಮತ್ತು ಇತರ ಜಿಲ್ಲೆಗಳ ಅಗ್ನಿಶಾಮಕ ದಳ ಮತ್ತು ತಜ್ಞರ ತಂಡ ಸ್ಥಳಕ್ಕೆ ಧಾವಿಸಿದೆ ಸಾವು-ನೋವಿನ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ ಕಟ್ಟಡ ಕುಸಿಯುವಾಗ ಕಾರ್ಮಿಕರು ಸೇರಿದಂತೆ 50ಕ್ಕೂ ಅಧಿಕ ಮಂದಿ ಸ್ಥಳದಲ್ಲಿದ್ದರು ಎಂದು ತಿಳಿದುಬಂದಿದೆ. 5ಜೆಸಿಬಿ ಸ್ಥಳದಲ್ಲಿ ಕಾರ್ಯಾಚರಣೆಯಲ್ಲಿ  ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 20 ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿ ದೀಪಾ ಚೋಳನ್‌ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದ್ದಾರೆ. ಐದು ಅಂತಸ್ತಿನ ಕಟ್ಟಡ ಇದಾಗಿದ್ದು, ಆರನೇ ಅಂತಸ್ತಿನ ಕಾಮಗಾರಿಗಳು ನಡೆಯುತ್ತಿದ್ದವು. ಇಂದು ಸಂಜೆ ಏಕಾಏಕಿ ಕಟ್ಟಡ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا