Urdu   /   English   /   Nawayathi

ಮಾಜಿ ಪ್ರಧಾನಿಗೆ ಪ್ರಿಯಾಂಕಾ ವಾದ್ರಾ ಅವಮಾನ: ವಿಡಿಯೋ ಬಿಟ್ಟು ಬಿಜೆಪಿ ತಪರಾಕಿ!

share with us

ನವದೆಹಲಿ: 21 ಮಾರ್ಚ್ (ಫಿಕ್ರೋಖಬರ್ ಸುದ್ದಿ) ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅವಮಾನಿಸಿದ್ದಾರೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಸ್ಮೃತಿ ಇರಾನಿ ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆಯುತ್ತಾರೆ. ಬಳಿಕ ಅದೇ ಹಾರವನ್ನು ಮಾಜಿ ದಿವಂಗತ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕುತ್ತಾರೆ. ಇದನ್ನು ಖಂಡಿಸಿರುವ ಸ್ಮೃತಿ ಇರಾನಿ ಈ ಮೂಲಕ ಪ್ರಿಯಾಂಕಾ ವಾದ್ರಾ ಮಾಜಿ ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದು ಕಾಂಗ್ರೆಸ್ ನ ನೈಜ ಸಂಸ್ಕೃತಿ ಎಂದು ವ್ಯಂಗ್ಯ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಯಾತ್ರೆ ಹಾಗೂ ಸಮಾವೇಶಗಳಲ್ಲಿ ಭಾಗಿಯಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

Chowkidar Smriti Z Irani✔@smritiirani

मुंडी झुकाइएके सर झटकाइएके
गुमान में बिटिया भूल गई मरजाद
आपन गले की उतरन, पहनाए दीहिन
शास्त्री जी के अपमान पर ताली बजाएके, हाथ हिलाइएके
चल दीहलें कांग्रेस बिटिया तोहार

31.1K

8:07 PM - Mar 20, 2019

18K people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا