Urdu   /   English   /   Nawayathi

ಹೈಕಮಾಂಡ್ ನಿರ್ಧಾರ ಒಪ್ಪಲೇಬೇಕು: ಸಿದ್ದರಾಮಯ್ಯ

share with us

ಬೆಂಗಳೂರು: 21 ಮಾರ್ಚ್ (ಫಿಕ್ರೋಖಬರ್ ಸುದ್ದಿ) ‘ಜೆಡಿಎಸ್ ಜೊತೆಗಿನ ಮೈತ್ರಿ ಹೈಕಮಾಂಡ್ ನಿರ್ಧಾರ. ಈ ನಿರ್ಧಾರವನ್ನು ನಾವೆಲ್ಲರೂ ಒಪ್ಪಲೇ ಬೇಕು’ ಎಂದು ಹಾಸನದ ‘ಕೈ’ ಮುಖಂಡರು, ಕಾರ್ಯಕರ್ತರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮನವೊಲಿಸಲು ಯತ್ನಿಸಿದರು. ‘ಹಾಸನ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ ಪರ ಕೆಲಸ ಮಾಡಲು ಸಾಧ್ಯವೇ ಇಲ್ಲ’ ಎಂದು ಪಟ್ಟು ಹಿಡಿದು ತಮ್ಮನ್ನು ಬುಧವಾರ ಬೆಳಿಗ್ಗೆ ಭೇಟಿಯಾದ ಸ್ಥಳೀಯ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರನ್ನು ಸಮಾಧಾನಪಡಿಸಲು ಸಿದ್ದರಾಮಯ್ಯ ಮುಂದಾದರು. ‘ನೀವು ಮೈತ್ರಿ ಮಾಡಿಕೊಂಡಿರಬಹುದು. ಆದರೆ, ನಾವು ಕೆಲಸ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಲು ಸಾಧ್ಯ ಇಲ್ಲ’ ಎಂದು ವಾದಿಸಿದ ಜಿಲ್ಲೆಯ ಕಾಂಗ್ರೆಸ್ ನಾಯಕರು, ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್.ಡಿ. ರೇವಣ್ಣ ವಿರುದ್ಧ ಆರೋಪಗಳ ಸುರಿಮಳೆಗೈದರು. ‘ಬಿಜೆಪಿ ವಿರುದ್ಧ ಹೋರಾಡುವ ಉದ್ದೇಶದಿಂದ ಮೈತ್ರಿ ಮಾಡಿಕೊಳ್ಳಲಾಗಿದೆ. ಹೀಗಾಗಿ, ಏನೇ ಅಸಮಾಧಾನ ಇದ್ದರೂ ಮರೆತು, ಜೆಡಿಎಸ್ ಜತೆ ಕೆಲಸ ಮಾಡಬೇಕು’ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಆದರೂ ಕಾರ್ಯಕರ್ತರು, ಮುಖಂಡರು ಒಪ್ಪಲು ತಯಾರಾಗಲಿಲ್ಲ. ‘ನೀವು ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿ ಎಂದು ಹೇಳುತ್ತೀರಿ. ಆದರೆ ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿ ಬೇರೆಯೇ ಇದೆ. ಇದು ನಿಮಗೂ ಗೊತ್ತಿಲ್ಲದೇ ಏನಿಲ್ಲ. ರೇವಣ್ಣ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಾರೆ. ಕಾರ್ಯಕರ್ತರ ಮೇಲೆ ಕೇಸ್ ಹಾಕಿಸುತ್ತಾರೆ. ಅಲ್ಲಿ ಜೆಡಿಎಸ್ ಕಾರ್ಯಕರ್ತರದ್ದೇ ದರ್ಬಾರು’ ಎಂದು ಆರೋಪಿಸಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا