Urdu   /   English   /   Nawayathi

ಅಮೇಥಿಯಲ್ಲಿ ರಾಹುಲ್‌ಗೆ ಎದುರಾಳಿಯಾಗಿ ಕಾಂಗ್ರೆಸ್ ಮುಖಂಡನ ಪುತ್ರ

share with us

ಅಮೇಥಿ: 26 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಎದುರಾಳಿಯಾಗಿ ಕಾಂಗ್ರೆಸ್ ಮುಖಂಡನ ಪುತ್ರನೇ ಇಲ್ಲಿ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಹಜಿ ಹರೂನ್ ರಶೀದ್ ಎಂಬಾತನೇ ರಾಹುಲ್ ಎದುರಾಳಿ. ಈತ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಆಪ್ತರಾಗಿದ್ದ ಕಾಂಗ್ರೆಸ್ ಮುಖಂಡ ಹಜಿ ಸುಲ್ತಾನ್‌ ಖಾನ್ ಅವರ ಮಗ. ಈ ವೇಳೆ ಮಾತನಾಡಿದ ರಶೀದ್,  ಕಾಂಗ್ರೆಸ್ ಸುಮಾರು ವರ್ಷಗಳಿಂದ ಸ್ಥಳೀಯ ನಾಯಕತ್ವದ ಬಗ್ಗೆ ನಿರ್ಲಕ್ಷ್ಯ ತೋರಿದೆ. ಇದು ಇಲ್ಲಿನ ಸ್ಥಳೀಯ ಹಾಗೂ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು. ಈ ಲೋಕಸಭಾ ಕ್ಷೇತ್ರದಲ್ಲಿ 6.5 ಲಕ್ಷ ಮುಸ್ಲಿಂ ಮತದಾರರಿದ್ದು, ಕಾಂಗ್ರೆಸ್ ವಿರುದ್ಧ ಮತಚಲಾವಣೆ ಮಾಡಲು ನಿರ್ಧರಿಸಿರುವುದಾಗಿಯೂ ತಿಳಿಸಿದರು.  ಅಮೇಥಿಯಲ್ಲಿ ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಹಾಗೂ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕಿಳಿದಿದ್ದಾರೆ. 

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا