Urdu   /   English   /   Nawayathi

ವಿಶ್ವ ರಂಗಭೂಮಿ ದಿನಾಚರಣೆ ಶುಭಾಶಯಗಳು; ಮಿಷನ್ ಶಕ್ತಿ ಕುರಿತು ಮೋದಿ ಕಾಲೆಳೆದ ರಾಹುಲ್ ಗಾಂಧಿ

share with us

ನವದೆಹಲಿ: 27 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಬಾಹ್ಯಾಕಾಶದಲ್ಲೇ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ ಡಿಆರ್ ಡಿಒ ವಿಜ್ಞಾನಿಗಳನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಭಿನಂಧಿಸಿದ್ದು, ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ ವಿಶ್ವ ರಂಗಭೂಮಿ ದಿನಾಚರಣೆಯ ಶುಭಾಶಯ ಹೇಳುವ ಮೂಲಕ ಮೋದಿ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹವೊಂದನ್ನು ಎ-ಸ್ಯಾಟ್ ಕ್ಷಿಪಣಿ ಬಳಕೆ ಮಾಡಿ ಹೊಡೆದುರುಳಿಸಿದ ಡಿಆರ್ ಡಿಒ ವಿಜ್ಞಾನಿಗಳ ಅಭೂತಪೂರ್ವ ಸಾಧನೆಯನ್ನು ಮುಕ್ತಕಂಠದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ. ಟ್ವೀಟರ್ ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವಿಜ್ಞಾನಿಗಳ ಈ ಸಾಧನೆ ನಿಜಕ್ಕೂ ಅದ್ಬುತ. ಅವರ ಸಾಧನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಈ ವಿಚಾರವನ್ನು ತಾವೇ ಖುದ್ದು ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತೂ ವ್ಯಂಗ್ಯ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವ ರಂಗಭೂಮಿ ದಿನಾಚರಣೆಯ ಶುಭಾಶಯಗಳು ಎಂದು ಹೇಳಿ ವ್ಯಂಗ್ಯ ಮಾಡಿದ್ದಾರೆ. ಆ ಮೂಲಕ ಡಿಆರ್ ಡಿಒ ಮಾಡಬೇಕಿದ್ದ ಘೋಷಣೆಯನ್ನು ಪ್ರಧಾನಿ ಮೋದಿ ಮಾಡಿದ್ದೇಕೆ ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ. 

ಡಿಆರ್ ಡಿಒ, ಇಸ್ರೋ ವಿಜ್ಞಾನಿಗಳ ಅಭೂತಪೂರ್ವ ಸಾಧನೆಗೆ ಅಭಿನಂದನೆ: ಕಾಂಗ್ರೆಸ್

ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಬಾಹ್ಯಾಕಾಶದಲ್ಲೇ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ ಡಿಆರ್ ಡಿಒ ವಿಜ್ಞಾನಿಗಳಿಗೆ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಾಧನೆ ಕುರಿತು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿ ಮಾಹಿತಿ ನೀಡಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಡಿಆರ್ ಡಿಒ, ಇಸ್ರೋ ವಿಜ್ಞಾನಿಗಳ ಅಭೂತಪೂರ್ವ ಸಾಧನೆಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದೆ. ಅಂತೆಯೇ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಡಿಆರ್ ಡಿಒಗಳ ನಿರ್ಮಾಣದ ಕುರಿತು ಹಳೆಯ ನೆನಪುಗಳನ್ನು ಮೆಲುಕು ಹಾಕಿರುವ ಕಾಂಗ್ರೆಸ್, 1962ರಲ್ಲಿ ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಇಂಡಿಯನ್ ಸ್ಪೇಸ್ ಪ್ರೋಗ್ರಾಮ್ ಅನ್ನು ಆರಂಭಿಸಿದ್ದರು. ಆ ಬಳಿಕ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾಗಾಂಧಿ ಅವರು ಇಸ್ರೋ ಸಂಸ್ಥೆಯನ್ನು ನಿರ್ಮಾಣ ಮಾಡಿದ್ದರು. ಈ ಇಬ್ಬರು ಮಹಾನ್ ಸಾಧಕರ ಕಾರ್ಯದಿಂದಾಗಿ ಇಂದು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಮ್ಮೆ ಪಡುವಂತಾಗಿದೆ. ಅಂತೆಯೇ 1958ರಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರು ಅವರು ಡಿಆರ್ ಡಿಒ ಸ್ಥಾಪನೆ ಮಾಡಿದ್ದರು. ಭಾರತದ ರಕ್ಷಣಾ ಕ್ಷೇತ್ರದಲ್ಲಿ ಡಿಆರ್ ಡಿಒದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

Rahul Gandhi✔@RahulGandhi

Well done DRDO, extremely proud of your work.

I would also like to wish the PM a very happy World Theatre Day.

42.6K

1:49 PM - Mar 27, 2019

Twitter Ads info and privacy

22K people are talking about this

Congress✔@INCIndia

We congratulate @isro @DRDO_India & the Govt on the latest achievement for India. The Indian Space Programme established in 1962 by Pt. Jawaharlal Nehru & the Indian Space Research Organisation set up under Smt. Indira Gandhi has always made India proud through its achievements.

4,478

1:37 PM - Mar 27, 2019

Twitter Ads info and privacy

2,297 people are talking about this

Congress✔@INCIndia

 · 4h

We congratulate @isro @DRDO_India & the Govt on the latest achievement for India. The Indian Space Programme established in 1962 by Pt. Jawaharlal Nehru & the Indian Space Research Organisation set up under Smt. Indira Gandhi has always made India proud through its achievements.

Congress✔@INCIndia

.@DRDO_India set up in 1958 under Pt. Jawaharlal Nehru was the first govt. agency to begin defence research & development. It has played a pivotal role in equipping our defence forces with the latest technological developments.

2,615

1:42 PM - Mar 27, 2019

Twitter Ads info and privacy

1,038 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا