Urdu   /   English   /   Nawayathi

ಲಾಲು ಜಾಮೀನಿಗೆ ಸಿಬಿಐ ವಿರೋಧ, ರಾಜಕೀಯದಲ್ಲಿ ಭಾಗಿಯಾಗುತ್ತಾರೆ ಎಂದ ತನಿಖಾ ಸಂಸ್ಥೆ

share with us

ನವದೆಹಲಿ: 09 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಲು ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇಂದು ಸುಪ್ರೀಂ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ ಸಿಬಿಐ, ಒಂದು ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದರೆ, ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಆರೋಪಿ ರಾಜಕೀಯ ಚಟುವಟಿಕೆಯಲ್ಲಿ ತೊಡಗುತ್ತಾರೆ ಎಂದು ಹೇಳಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸುವುದಕ್ಕಾಗಿ ಲಾಲು ಪ್ರಸಾದ್ ಯಾದವ್ ವೈದ್ಯಕೀಯ ನೆಪವೊಡ್ಡಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಅವರು ನ್ಯಾಯಾಲಯವನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿರುವ ಸಿಬಿಐ, ಅವರಿಗೆ ಜಾಮೀನು ನೀಡಿದಂತೆ ಸುಪ್ರೀಂಗೆ ಮನವಿ ಮಾಡಿದೆ. ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಏಪ್ರಿಲ್ 6 ರಂದು ಪ್ರಕಟಣೆ ಹೊರಡಿಸಿದ್ದ ಸುಪ್ರೀಂ, ಏಪ್ರಿಲ್. 10 ರಂದು ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತ್ತು. ಅಲ್ಲದೆ ಏಪ್ರಿಲ್. 09ರ ಒಳಗಾಗಿ ಆಕ್ಷೇಪಣೆ ಅಥವಾ ಉತ್ತರ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು. ಕೋರ್ಟ್ ನಿರ್ದೇಶನದಂತೆ ಲಾಲೂ ಜಾಮೀನು ಅರ್ಜಿಗೆ ಇಂದು ಆಕ್ಷೇಪಣೆ ಸಲ್ಲಿಸಿರುವ ಸಿಬಿಐ ಅಧಿಕಾರಿಗಳು, “ರಾಂಚಿಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ನ  ಸುಸಜ್ಜಿತ ವಿಶೇಷ ವಾರ್ಡ್ ನಲ್ಲಿ ದಾಖಲಾಗಿರುವ ಲಾಲೂ ಪ್ರಸಾದ್ ಯಾದವ್ ರನ್ನು ನೋಡಲು ಪ್ರತಿದಿನ ಯಾವ ಯಾವ ರಾಜಕಾರಣಿಗಳು ಆಗಮಿಸಿದ್ದರು ಎಂಬ ಪಟ್ಟಿಯನ್ನು ನ್ಯಾಯಾಲಯದ ಮುಂದಿಟ್ಟು ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا