Urdu   /   English   /   Nawayathi

ಪ್ಯಾರಿಸ್: ನಾಟ್ರೆ ಡೇಮ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ಬೆಂಕಿ ಅನಾಹುತ

share with us

ಪ್ಯಾರಿಸ್: 16 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಫ್ರಾನ್ಸ್‌ನ ಇತಿಹಾಸ ಪ್ರಸಿದ್ಧ ನಾಟ್ರೆ ಡೇಮ್ ಕ್ಯಾಥೊಲಿಕ್ ಚರ್ಚ್‌ನಲ್ಲಿ (ಕ್ಯಾಥೆಡ್ರಲ್) ಸೋಮವಾರ ಸಂಜೆ ಬೆಂಕಿ ಅನಾಹುತ ಸಂಭವಿಸಿದೆ. ಪರಿಣಾಮವಾಗಿ ಚರ್ಚ್‌ನ ಗೋಪುರಗಳಿಗೆ ಹಾನಿಯಾಗಿದೆ.  ದಿನನಿತ್ಯ ಸಾವಿರಾರು ಜನ ಭೇಟಿ ನೀಡುವ ಪ್ರದೇಶ ಇದಾಗಿದೆ. ಅದೃಷ್ಟವಶಾತ್, ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿಯ ಕೆನ್ನಾಲಿಗೆ ಮತ್ತು ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿ ಅಲ್ಲಿ ಸೇರಿದ್ದ ಸಾವಿರಾರು ಜನರನ್ನು ಭೀತರನ್ನಾಗಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸುಮಾರು 500 ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಸ್ಥಳಿಯ ಕಾಲಮಾನ ರಾತ್ರಿ 11 ಗಂಟೆ ವೇಳೆಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಗ್ನಿಶಾಮಕ ದಳದ ಮುಖ್ಯಸ್ಥ ಜೀನ್-ಕ್ಲಾಡೆ ಗಾಲೆಟ್ ತಿಳಿಸಿದ್ದಾರೆ. ಎರಡು ಉನ್ನತ ಗೋಪುರಗಳಿಗೆ (ಟವರ್‌) ಹಾನಿಯಾಗಿದ್ದು, ಅವುಗಳನ್ನು ರಕ್ಷಿಸಲಾಗಿದೆ. ಆದರೆ ಛಾವಣಿಯ ಮೂರನೇ ಎರಡರಷ್ಟು ಭಾಗ ನಾಶವಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಕಿ ಅನಾಹುತಕ್ಕೆ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಚರ್ಚ್‌ನ ಒಳಭಾಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಮರದ ಹಲಗೆಗಳಿಗೆ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا