Urdu   /   English   /   Nawayathi

ರೋಹಿತ್ ತಿವಾರಿ ಕೊಲೆ ಪ್ರಕರಣ: ಪೊಲೀಸರಿಂದ ಪತ್ನಿ ಅಪೂರ್ವ ವಿಚಾರಣೆ

share with us

ನವದೆಹಲಿ: 20 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಅವರ ಪತ್ನಿ ಅಪೂರ್ವ ಅವರನ್ನು ಶನಿವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ದೆಹಲಿಯ ಡಿಫೆನ್ಸ್ ಕಾಲೋನಿಯಲ್ಲಿರುವ ತಿವಾರಿ ನಿವಾಸದಲ್ಲಿಯೇ ಪೊಲೀಸರು ಅಪೂರ್ವ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ. ರೋಹಿತ್ ಅವರು ಅಪೂರ್ವ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನದಿಂದಲೂ ಅವರಿಬ್ಬರ ಸಂಬಂಧ ಅಷ್ಟು ಚೆನ್ನಾಗಿ ಇರಲಿಲ್ಲ. ಪೊಲೀಸರು ಈಗ ರೋಹಿತ್ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ರೋಹಿತ್ ಅವರ ತಾಯಿ ಉಜ್ವಲಾ ತಿವಾರಿ ಅವರು ವರದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ರೋಹಿತ್ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದ್ದು, ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್‌ 302 ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೋಹಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವರ ಮೂಗಿನಲ್ಲಿ ರಕ್ತ ಸೋರುತ್ತಿತ್ತು. ಹೀಗಾಗಿ ಪಿಲ್ಲೋದಿಂದ ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಮಂಗಳವಾರ ರೋಹಿತ್ ತಿವಾರಿ ಅವರು ಡಿಫೆನ್ಸ್ ಕಾಲೋನಿಯ ನಿವಾಸದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಅವರು ಪ್ರತಿಕ್ರಿಯೆ ನೀಡದ್ದನ್ನು ನೋಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا