Urdu   /   English   /   Nawayathi

ಬೈಕ್​ ಸ್ಕಿಡ್: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

share with us

ಕಾರವಾರ: 21 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಚಲಿಸುತ್ತಿದ್ದ ಬೈಕ್​ವೊಂದು ನಿಯಂತ್ರಣ ತಪ್ಪಿ ಸ್ಕಿಡ್​ ಆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಭಟ್ಕಳ ತಾಲೂಕಿನ ಸಂಶುದ್ದೀನ್ ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಾಲೂಕಿನ ಮುಂಡಳ್ಳಿಯ ನಿವಾಸಿ ರಾಜೇಶ್ ನಾಯ್ಕ್ (26) ಮೃತಪಟ್ಟ ಯುವಕ. ಗಾಯಗೊಂಡ ದಿನೇಶ್ ನಾಯ್ಕ್ (21) ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ಸಾಗಿಸಲಾಗಿದೆ. ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ವೇಗವಾಗಿ ಬೈಕ್​​ ಸವಾರನ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಬೈಕ್​ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿ ರಾಜೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಎಸ್ಐ ಕುಸುಮಾಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಈ, ಇ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا