Urdu   /   English   /   Nawayathi

ಪ್ಲಾಸ್ಟಿಕ್​​ ಗೋದಾಮಿಗೆ ತಗುಲಿದ ಬೆಂಕಿ: ಅದೃಷ್ಟವಶಾತ್​​​ ಕಾರ್ಮಿಕರು ಪಾರು

share with us

ಧಾರವಾಡ: 22 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಗರದ ಲಕಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಲಕಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಕೈಟೆಕ್ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ ತಗುಲಿತ್ತು. ಪ್ಲಾಸ್ಟಿಕ್ ತ್ಯಾಜ್ಯಗಳ ಉಷ್ಣಾಂಶ ಹೆಚ್ಚಾದ ಪರಿಣಾಮ ಗೋದಾಮಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ‌ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ಇನ್ನು ಬೆಂಕಿ‌ ಅವಘಡದಿಂದ ಗೋದಾಮಿನಲ್ಲಿ‌ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೊತೆಗೆ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಬೆಂಕಿಗಾಹುತಿಯಾಗಿದ್ದು, ಧಾರವಾಡ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا