Urdu   /   English   /   Nawayathi

ಪಶ್ಚಿಮ ಬಂಗಾಳದಲ್ಲಿ ವೈಮಾನಿಕ ಸಮೀಕ್ಷೆಗೆ ಮಮತಾ ನಕಾರ

share with us

ಕೊಲ್ಕತಾ: 06 ಮೇ (ಫಿಕ್ರೋಖಬರ್ ಸುದ್ದಿ) ಫೋನಿ ಚಂಡಮಾರುತದಿಂದ ಭಾಗಶಃ ಹಾನಿಗೀಡಾದ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದರೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ನೀಡಲಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಒಡಿಶಾದ ಸಂತ್ರಸ್ತ ಪೀಡಿತ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಪಶ್ಚಿಮ ಬಂಗಾಳದಲ್ಲೂ ವೈಮಾನಿಕ ಸಮೀಕ್ಷೆ ನಡೆಸುವ ಉದ್ದೇಶವನ್ನು ಪ್ರಧಾನಿ ಹೊಂದಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಚುನಾವಣಾ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿರುವುದರಿಂದ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಕಾರಣ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಫೋನಿ ಚಂಡಮಾರುತ ವಿಷಯದಲ್ಲಿ ಮಮತಾ ಅವರು ಕುಂಟು ನೆಪ ಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಪ್ರಧಾನಿಯವರಿಂದ ಪಶ್ಚಿಮ ಬಂಗಾಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದು ಅವರಿಗೆ ಬೇಕಿಲ್ಲ. ಇದೇ ಕಾರಣಕ್ಕಾಗಿ ಅವರು ಇಲ್ಲ ಸಲ್ಲದ ನೆಪವೊಡ್ಡಿ ಏರಿಯಲ್ ಸರ್ವೆಗೆ ನಿರಾಕರಿಸಿದ್ದಾರೆ ಎಂದು ನಾಯಕರು ವಿಷಾದ ವ್ಯಕ್ತಪಡಿಸಿದ್ದಾರೆ.

ಈ, ಸಂ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا