Urdu   /   English   /   Nawayathi

ಎಲ್ಲ ವಿವಿಪ್ಯಾಟ್‌ಗಳ ಪರಿಶೀಲನೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

share with us

ನವದೆಹಲಿ: 21 ಮೇ (ಫಿಕ್ರೋಖಬರ್ ಸುದ್ದಿ) ಚುನಾವಣೆ ಫಲಿತಾಂಶ ಪ್ರಕಟಿಸುವುದಕ್ಕೂ ಮೊದಲು ಎಲ್ಲ ವಿದ್ಯುನ್ಮಾನ ಮತಯಂತ್ರಗಳ ಮತದಾನ ದೃಢೀಕರಣ ಚೀಟಿ (VVPAT) ಗಳನ್ನು ಪರಿಶೀಲಿಸಲು ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ತಂತ್ರಜ್ಞಾನ ಕ್ಷೇತ್ರ ಕೆಲ ಮಂದಿ ಈ ಅರ್ಜಿಯನ್ನು ಸಲ್ಲಿಸಿದ್ದರು. ಅಲ್ಲದೇ, ರಜೆ ಕಾಲದ ಪೀಠವು ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಕೋರಲಾಗಿತ್ತು.  ಇದೇ ಮಾದರಿಯ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯಿ ಅವರ ಪೀಠ ಈಗಾಗಲೇ ವಿಚಾರಣೆ ನಡೆಸಿದೆ. ಹೀಗಾಗಿ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗದು ಎಂದು ನ್ಯಾಯಮೂರ್ತಿ ಅರುಣ್‌ ಮಿಶ್ರಾ ಮತ್ತು ಎಂ.ಆರ್  ಶಾ ಅವರಿದ್ದ ರಜೆ ಕಾಲದ ಪೀಠ ಹೇಳಿತ್ತು. ಆದರೆ, ಅರ್ಜಿದಾರರ ಪರ ವಕೀಲರು ಒತ್ಡದ ಮೇರೆ ನ್ಯಾಯಮೂರ್ತಿ ಮಿಶ್ರಾ ಅರ್ಜಿಯ ವಿಚಾರಣೆ ನಡೆಸಿದರು. ಆದರೆ, ಅರ್ಜಿಯನ್ನು ಉಪದ್ರವಕಾರಿ ಎಂದ ನ್ಯಾಯಮೂರ್ತಿ, ತಕ್ಷಣವೇ ಅರ್ಜಿಯನ್ನು ವಜಾ ಗೊಳಿಸಿದರು. ‘ಈ ದೇಶ ತನಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳಲು ಬಿಡಿ,’ ಎಂದೂ ನ್ಯಾಯಮೂರ್ತಿಗಳು ತಾಕೀತು ಮಾಡಿದರು. ಪ್ರತಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ, ಪ್ರತಿ ವಿಧಾನಸಭೆ ಕ್ಷೇತ್ರದ ತಲಾ ಐದು ವಿವಿಪ್ಯಾಟ್‌ಗಳನ್ನು ಪರಿಶೀಲನೆ ನಡೆಸಬೇಕು ಎಂದು ಏಪ್ರಿಲ್‌ 8ರಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ತೀರ್ಪಿಗೆ ಮೇಲ್ಮನವಿ ಸಲ್ಲಿಸಿದ್ದ ರಾಜಕೀಯ ಪಕ್ಷಗಳು, ವಿವಿಪ್ಯಾಟ್‌ ಪರಿಶೀಲನೆ ಪ್ರಮಾಣವನ್ನು ಶೇ. 50ಕ್ಕೆ ಏರಿಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ. 

View image on Twitter

ANI✔@ANI

Supreme Court dismisses the petition filed by a group of technocrats seeking a direction that the number of machines subject to verification of VVPATs to be increased to 100%. A vacation bench of the Apex Court did not find any merit in the petition filed by the technocrats.

680

10:57 AM - May 21, 2019

292 people are talking about this

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا